ಕೊರೊನಾ ವೈರಸ್ ಹರಡದಂತೆ ಸ್ವಯಂ ಗ್ರಾಮಸ್ಥರೇ ಚರಂಡಿ ಸ್ವಚ್ಛತೆಗೆ ಮುಂದಾದರು
ಚಂದ್ರವಳ್ಳಿ ನ್ಯೂಸ್ ಹಿರಿಯೂರು
ಹಿರಿಯೂರು ತಾಲೂಕಿನ ಉಡುವಳ್ಳಿ ಗ್ರಾಮ ಪಂಚಾಯತಿಯ ವಸಂತನಗರ ಗ್ರಾಮದಲ್ಲಿ ಗ್ರಾಮಸ್ಥರೇ ಇಡೀ ಗ್ರಾಮದ ಎಲ್ಲ ಚರಂಡಿಗಳನ್ನು ಸ್ವಚ್ಛ ಮಾಡುತ್ತಿದ್ದಾರೆ.
ಗ್ರಾಮಸ್ಥರು ಹೇಳುವ ಪ್ರಕಾರ ಯಾವುದೇ ಗ್ರಾಮ ಪಂಚಾಯತಿ ಪಿಡಿಒ ಸೇರಿದಂತೆ ಸಂಬಂಧಪಟ್ಟ ಗ್ರಾಮ ಪಂಚಾಯತಿಯ ಯಾರೊಬ್ಬ ಸಿಬ್ಬಂದಿಯು ಗ್ರಾಮಕ್ಕೆ ಬಂದು ಸ್ವಚ್ಛತೆ ಕಾರ್ಯಕ್ರಮದಲ್ಲಿ ಭಾಗವಹಿಸಿಲ್ಲ. ಗ್ರಾಮದಲ್ಲಿ ಮಾರಣಾಂತಿಕ ಕಾಯಿಲೆ ಬಗ್ಗೆ ಯಾವುದೇ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿರುವುದಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.
What’s your Reaction?
+1
+1
+1
+1
+1
+1
+1