ಜನಸಂದಣಿ ಇರುವೆಡೆ ಸೋಂಕು ನಿವಾರಕ ಮಾರ್ಗಗಳ ಅಳವಡಿಕೆಗೆ ಚಿಂತನೆ- ಜಿ.ಹೆಚ್.ತಿಪ್ಪಾರೆಡ್ಡಿ



ಚಂದ್ರವಳ್ಳಿ ನ್ಯೂಸ್ ಚಿತ್ರದುರ್ಗ

   ಹೆಚ್ಚು ಜನಸಂದಣಿ ಇರುವ ಕಡೆಗಳಲ್ಲಿ ಸೋಂಕು ನಿವಾರಕ ಮಾರ್ಗ ಅಳವಡಿಸುವ ಕುರಿತು ಚಿಂತನೆ ನಡೆಸಲಾಗಿದೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಹೇಳಿದರು.
   ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಜಿಲ್ಲಾಡಳಿತ ಮತ್ತು ನಗರಸಭೆ ವತಿಯಿಂದ ಸಿದ್ಧಪಡಿಸಿರುವ ಸೋಂಕು ನಿವಾರಕ ಮಾರ್ಗಕ್ಕೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು.

    ಚಿತ್ರದುರ್ಗ ನಗರದಲ್ಲಿ ಜಿಲ್ಲಾಡಳಿತ ಹಾಗೂ ನಗರಸಭೆ ವತಿಯಿಂದ ಅತಿ ಕಡಿಮೆ ವೆಚ್ಚದಲ್ಲಿ ಸೋಂಕು ನಿವಾರಕ ಮಾರ್ಗ ನಿರ್ಮಿಸಲಾಗಿದೆ. ಜಿಲ್ಲೆಯ ಜನರು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರ ಮೂಲಕ ಕೋವಿಡ್-19 ಹರಡುವಿಕೆ ತಡೆಗಟ್ಟಲು ಸಹಕರಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದ ಶಾಸಕರು, ಸೋಂಕು ನಿವಾರಕ ಮಾರ್ಗ ಆರಂಭಿಸಿದವರಲ್ಲಿ ಚಿತ್ರದುರ್ಗ ಮೂರನೇಯದು. ತಮಿಳುನಾಡು, ಮೈಸೂರು ನಂತರ ಚಿತ್ರದುರ್ಗದಲ್ಲಿ ಜಿಲ್ಲಾಧಿಕಾರಿಗಳ ಮಾರ್ಗದರ್ಶನದ ಮೇರೆಗೆ ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಸೋಂಕು ನಿವಾರಕ ಮಾರ್ಗ ಅಳವಡಿಸಲಾಗಿದೆ ಎಂದು ಹೇಳಿದರು.

   ಜಿಲ್ಲಾಸ್ಪತ್ರೆಯಲ್ಲಿ ಎರಡು ಸೊಂಕು ನಿವಾರಕ ಮಾರ್ಗ ನಿರ್ಮಿಸುವಂತೆ ಬೇಡಿಕೆ ಇದೆ. ಈ ಕುರಿತು ನಗರಸಭೆಯೊಂದಿಗೆ ಚರ್ಚಿಸಲಾಗಿದೆ. ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ನಿರ್ಮಿಸಿದ ಸೋಂಕು ನಿವಾರಕ ಮಾರ್ಗದ ವಿಶೇಷವೆಂದರೆ ಜಿಲ್ಲಾಧಿಕಾರಿ, ನಗರಸಭೆ ಹಾಗೂ ಇಂಜಿನಿಯರ್‍ಗಳ ಸಹಕಾರದೊಂದಿಗೆ ಕೇವಲ 35 ಸಾವಿರ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ ಎಂದರು.

   ಕೋವಿಡ್-19 ಕುರಿತಂತೆ ಜಿಲ್ಲೆಯಲ್ಲಿ ಇದುವರೆಗೆ ಯಾವುದೇ ಸೋಂಕು ಪತ್ತೆಯಾಗಿಲ್ಲ. ಸಾರ್ವಜನಿಕರು ಕೊರೊನಾ ಹರಡುವಿಕೆ ತಡೆಗಟ್ಟಲು ಅಗತ್ಯಕ್ರಮ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಜೊತೆಗೆ ಲಾಕ್‍ಡೌನ್ ಎಲ್ಲರೂ ಬೆಂಬಲಿಸುವುದರ ಮೂಲಕ ಚಿತ್ರದುರ್ಗ ಜಿಲ್ಲೆಯನ್ನು ಸೋಂಕು ರಹಿತ ಜಿಲ್ಲೆಯನ್ನಾಗಿಸೋಣ ಎಂದು ಆಶಯ ವ್ಯಕ್ತಪಡಿಸಿದರು.

   ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಮಾತನಾಡಿ, ಕೋವಿಡ್-19 ಸೋಂಕು ಹರಡಂದತೆ ಮುಂಜಾಗ್ರತಾ ಕ್ರಮವಾಗಿ ಸೋಂಕು ನಿವಾರಕ ಮಾರ್ಗ ಮಾಡಲಾಗಿದೆ. ಸಾರ್ವಜನಿಕರು ಸಾಮಾಜಿಕ ಅಂತರ ಕಾಪಾಡುತ್ತಿದ್ದಾರೆ. ಅಗತ್ಯ ವಸ್ತುಗಳ ಖರೀದಿಗಾಗಿ ಕೆಲವರು ಮಾತ್ರ ಹೊರಗಡೆ ಬರುತ್ತಿದ್ದಾರೆ. ಸಾರ್ವಜನಿಕರು ಆದಷ್ಟು ಮನೆಯಲ್ಲಿ ಇರುವುದು ಉತ್ತಮ ಎಂದು ಹೇಳಿದರು.

 ಗ್ರಾಮೀಣ ಮತ್ತು ನಗರದ ಪ್ರದೇಶದ ವಾರ್ಡ್ ವ್ಯಾಪ್ತಿಗಳಲ್ಲಿ ಶಿಕ್ಷಕರನ್ನು ನಿಯೋಜನೆ ಮಾಡಿ, ಅಲ್ಲಿನ ಪ್ರದೇಶಗಳ ಕುಂದು ಕೊರತೆಗಳ ಮಾಹಿತಿ ಸಂಗ್ರಹಿಸಿ, ಸಮಸ್ಯೆಗಳ ನಿವಾರಣೆಗೆ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

   
ನಗರಸಭೆ ಪೌರಾಯುಕ್ತ ಜೆ.ಟಿ.ಹನುಮಂತರಾಜು ಮಾತನಾಡಿ, ಮಾರುಕಟ್ಟೆಗಳಲ್ಲಿ ಹೆಚ್ಚು ಜನಸಂದಣಿ ಇರುವುದರಿಂದ ಸೋಂಕು ನಿವಾರಕ ಮಾರ್ಗ ಅಳವಡಿಸಲಾಗಿದೆ. ಸಾರ್ವಜನಿಕರು ಇದೇ ಮಾರ್ಗದ ಮೂಲಕ ಓಡಾಡುವಂತೆ ವ್ಯವಸ್ಥೆ ಮಾಡಲಾಗಿದೆ. ಸೋಡಿಯಂ ಹೈಪೊಕ್ಲೋರೈಡ್ ಹಾಗೂ ನೀರು ಇವುಗಳ ಮಿಶ್ರಣದಿಂದ ಸೋಂಕು ನಿವಾರಕ ದ್ರಾವಣ ಸಿದ್ದಪಡಿಸಲಾಗಿದೆ. ಸೋಂಕು ನಿವಾರಕ ಮಾರ್ಗ ಬೆಳಗಿನ ಜಾವ 04 ರಿಂದ  09 ರವರೆಗೆ ಕಾರ್ಯನಿರ್ವಹಿಸಲಿದೆ ಎಂದರು.
   
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಾಜಶೇಖರ್ ಹಾಗೂ ನಗರಸಭೆ ಸಿಬ್ಬಂದಿ ದ್ದರು.

What’s your Reaction?
+1
0
+1
0
+1
0
+1
0
+1
0
+1
0
+1
0
Chandravalli Ad Space

ನಿಮ್ಮ ಜಾಹೀರಾತು ನಮ್ಮ ನ್ಯೂಸ್ ಚಾನೆಲ್ ನಲ್ಲಿ ನೀಡಬೆಕೆ? ಈ ಕೇಳಗಿನ ಲಿಂಕ್ ಒತ್ತಿ ನಮ್ಮನ್ನು ಸಂಪರ್ಕಿಸಿ

Leave a Reply

Open chat
ಸಂಪರ್ಕಿಸಿ
%d bloggers like this: