ಸ್ವಚ್ಛತೆ ಕಾಪಾಡಿದರೆ ಮಾತ್ರ ಜೀವ ಉಳಿಸಿಕೊಳ್ಳಲು ಸಾಧ್ಯ..
ಚಂದ್ರವಳ್ಳಿ ನ್ಯೂಸ್ ಹಿರಿಯೂರು
ಸ್ವಚ್ಛತೆ ಕಾಪಾಡಿದರೆ ಮಾತ್ರ ಜೀವ ಉಳಿಸಿಕೊಳ್ಳಲು ಸಾಧ್ಯ. ಮಸ್ಕಲ್ ಮತ್ತು ಐಮಂಗಲ ಕ್ಷೇತ್ರದ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯ್ತ್ ಗಳ ವ್ಯಾಪ್ತಿಯ ಗ್ರಾಮಗಳಲ್ಲಿ ಕೋವಿಡ್-೧೯ ಸಾಂಕ್ರಾಮಿಕ ರೋಗ ತಡೆಯುವ ಹಿನ್ನೆಲೆಯಲ್ಲಿ ಬ್ಲೀಚಿಂಗ್ ಪೌಡರ್ ಮತ್ತು ಫಿನಾಯಿಲ್ ಉಪಯೋಗಿಸಿ ಹೈಡ್ರೋ ಕ್ಲೋರಿನೇಷನ್ ಮಾಡಬೇಕು. ಅಲ್ಲದೆ ಎಲ್ಲ ಗ್ರಾಮಗಳಿಗೆ ಫಾಗಿಂಗ್ ಮಾಡುವ ಮೂಲಕ ಸೊಳ್ಳೆಗಳ ನಿಯಂತ್ರಣ ಮಾಡಬೇಕು. ಪ್ರತಿ ಗ್ರಾಮದಲ್ಲೂ ಸ್ವಚ್ಛತೆ ಕಾಪಾಡುವಂತೆ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಲು ವಿವಿಧ ಗ್ರಾಮ ಪಂಚಾಯತಿಗಳ ಅಧ್ಯಕ್ಷರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ಹಿರಿಯೂರು ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯಲ್ಲಿ ತಾಲ್ಲೂಕು ಪಂಚಾಯತ್ ಅಧ್ಯಕ್ಷೆ ಲಕ್ಷ್ಮೀದೇವಿ ಮಹಾಂತೇಶ್, ಮಸ್ಕಲ್ ಜಿಲ್ಲಾ ಪಂಚಾಯತ್ ಸದಸ್ಯೆ ಶಶಿಕಲಾ ಸುರೇಶ್ ಬಾಬು, ಐಮಂಗಲ ಜಿಲ್ಲಾ ಪಂಚಾಯತ್ ಕ್ಷೇತ್ರದ ಸದಸ್ಯೆ ರಾಜೇಶ್ವರಿ ಗಿರೀಶ್, ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷೆ ಲಕ್ಷ್ಮೀದೇವಿ ವೆಂಕಟೇಶ್, ರಂಗೇನಹಳ್ಳಿ ತಾಲ್ಲೂಕು ಪಂಚಾಯತ್ ಸದಸ್ಯ ಕೆ.ಶಂಕರಮೂರ್ತಿ, ಸೂರಗೊಂಡನಹಳ್ಳಿ ತಾಲ್ಲೂಕು ಪಂಚಾಯತ್ ಕ್ಷೇತ್ರದ ಸದಸ್ಯ ಎಸ್.ಚಂದ್ರಪ್ಪ, ಐಮಂಗಲ ತಾಲ್ಲೂಕು ಪಂಚಾಯತ್ ಕ್ಷೇತ್ರದ ಸದಸ್ಯ ಬಿ.ಕೆ.ತಿಪ್ಪೇಸ್ವಾಮಿ (ಅಪ್ಪಾಜಿ), ಯರಬಳ್ಳಿ ತಾಲ್ಲೂಕು ಪಂಚಾಯತ್ ಕ್ಷೇತ್ರದ ಸದಸ್ಯೆ ಡಿ.ಪುಷ್ಪರಂಗನಾಥ್, ಗ್ರಾಮ ಪಂಚಾಯ್ತಿ ಅಧ್ಯಕ್ಷರುಗಳು ಮತ್ತು ಗ್ರಾಮ ಪಂಚಾಯತ್ ಸದಸ್ಯರುಗಳು ಹಾಗೂ ತಾಲ್ಲೂಕು ವೈದ್ಯಾಧಿಕಾರಿ ಟಿ.ವೆಂಕಟೇಶ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ಹನುಮಂತಪ್ಪ ಇವರು ಹಾಜರಿದ್ದರು.