ಕರ್ಮಯೋಗಿ ಸಿದ್ಧರಾಮೇಶ್ವರರು ಕೆರೆ ಕಟ್ಟೆ ನಿರ್ಮಿಸಿ ಇಡೀ ಸಮುದಾಯಕ್ಕೆ ದಾರಿದೀಪವಾಗಿದ್ದಾರೆ-ಉಪವಿಭಾಗಾಧಿಕಾರಿ ಡಾ.ನಾಗರಾಜ್ …

ಕರ್ಮಯೋಗಿ ಸಿದ್ಧರಾಮೇಶ್ವರರು ಕೆರೆ ಕಟ್ಟೆ ನಿರ್ಮಿಸಿ ಇಡೀ ಸಮುದಾಯಕ್ಕೆ ದಾರಿದೀಪವಾಗಿದ್ದಾರೆ-ಉಪವಿಭಾಗಾಧಿಕಾರಿ ಡಾ.ನಾಗರಾಜ್ …

ಚಿತ್ರದುರ್ಗ:

ಕಾಯಕದಿಂದ ದೈವತ್ವವನ್ನು ದರ್ಶಿಸಿದ ಕರ್ಮಯೋಗಿ ಸಿದ್ಧರಾಮೇಶ್ವರರು ತಮ್ಮ ಕಾಯಕದ ನಿಷ್ಠೆಯಿಂದಾಗಿ ಸಮಾಜಕ್ಕೆ ಅರಿವನ್ನು ಮೂಡಿಸಿದ ಮಹಾಶರಣ. ಮನುಷ್ಯ ಸಮಾಜದಲ್ಲಿ ಹುಟ್ಟಿ ಇಡೀ ಸಮುದಾಯಕ್ಕೆ ದಾರಿದೀಪವಾಗಿದ್ದಾರೆ ಎಂದು ಉಪವಿಭಾಗಾಧಿಕಾರಿ ಡಾ.ನಾಗರಾಜ್ ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಧಿಕಾರಿಯವರ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾಯಕಯೋಗಿ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಹನ್ನೆರಡನೇ ಶತಮಾನದಲ್ಲಿಯೇ ಪ್ರಜಾಪ್ರಭುತ್ವದ ಮಹತ್ವವನ್ನು ಕಾಯಕ ಹಾಗೂ ವಚನಗಳ ಮೂಲಕ ತೋರಿಸಿಕೊಟ್ಟಿದ್ದಾರೆ. ಶರಣ ಸಿದ್ಧರಾಮೇಶ್ವರರು ಕೆರೆ ಕಟ್ಟೆಗಳನ್ನು ನಿರ್ಮಿಸಿ ಜನ ಸಮುದಾಯಕ್ಕೆ ಆಸರೆಯಾಗಿದ್ದಾರೆ ಎಂದರು.
ನಗರಸಭೆ ಪೌರಯುಕ್ತ ಜಿ.ಟಿ.ಹನುಮಂತರಾಜು, ರಂಗ ನಿರ್ದೇಶಕ ಕೆ.ಪಿ.ಎಂ. ಗಣೇಶಯ್ಯ, ನಿವೃತ್ತ ಪ್ರಾಚಾರ್ಯ ಹೆಚ್.ಕನಕದಾಸ್, ಭೋವಿ ಸಮಾಜದ ಜಿಲ್ಲಾಧ್ಯಕ್ಷ ಟಿ.ತಿಪ್ಪೇಸ್ವಾಮಿ, ಕಾರ್ಯದರ್ಶಿ ಹೆಚ್.ಲಕ್ಷ್ಮಣ್, ಭೋವಿ ಗುರುಪೀಠದ ಕಾರ್ಯ ನಿರ್ವಹಣಾಧಿಕಾರಿ ಗೌನಹಳ್ಳಿ ಗೋವಿಂದಪ್ಪ, ಗಾಯಕ ಕೆ.ಗಂಗಾಧರ ಉಪಸ್ಥಿತರಿದ್ದರು.

What’s your Reaction?
+1
0
+1
0
+1
0
+1
0
+1
0
+1
0
+1
0
Chandravalli Ad Space

ನಿಮ್ಮ ಜಾಹೀರಾತು ನಮ್ಮ ನ್ಯೂಸ್ ಚಾನೆಲ್ ನಲ್ಲಿ ನೀಡಬೆಕೆ? ಈ ಕೇಳಗಿನ ಲಿಂಕ್ ಒತ್ತಿ ನಮ್ಮನ್ನು ಸಂಪರ್ಕಿಸಿ

Leave a Reply

Open chat
ಸಂಪರ್ಕಿಸಿ
%d bloggers like this: