ಜಲಕ್ರಾಂತಿ ಮೂಲಕ ಸಕಲ ಜೀವಾತ್ಮರಿಗೆ ಲೇಸು ಬಯಸಿದ ಸಿದ್ಧರಾಮೇಶ್ವರರು ಮೌಢ್ಯ ಸಂಪ್ರದಾಯಗಳಿಂದ ಮೌಲ್ಯ ಸಂಪ್ರದಾಯಗಳಿಗೆ ನಾಂದಿ ಹಾಡಿದವರು… 

ಜಲಕ್ರಾಂತಿ ಮೂಲಕ ಸಕಲ ಜೀವಾತ್ಮರಿಗೆ ಲೇಸು ಬಯಸಿದ ಸಿದ್ಧರಾಮೇಶ್ವರರು ಮೌಢ್ಯ ಸಂಪ್ರದಾಯಗಳಿಂದ ಮೌಲ್ಯ ಸಂಪ್ರದಾಯಗಳಿಗೆ ನಾಂದಿ ಹಾಡಿದವರು… 

ಚಿತ್ರದುರ್ಗ:

ಬದುಕಿನ ಪರಿವರ್ತನೆಗೆ ದರ್ಪಣ ಸಿದ್ಧರಾಮರ ಜೀವನ ಎಂದು ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ತಿಳಿಸಿದರು.
ಸಿದ್ಧರಾಮೇಶ್ವರರ ಜಯಂತಿ ಅಂಗವಾಗಿ ಭೋವಿಗುರುಪೀಠದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಸಾನಿಧ್ಯವಹಿಸಿ ಮಾತನಾಡಿದ ಅವರು ಮೌಢ್ಯ ಸಂಪ್ರದಾಯಗಳಿಂದ ಮೌಲ್ಯ ಸಂಪ್ರದಾಯಗಳಿಗೆ ನಾಂದಿ ಹಾಡಿದವರು. ಜಲಕ್ರಾಂತಿ ಮೂಲಕ ಸಕಲ ಜೀವಾತ್ಮರಿಗೆ ಲೇಸನ್ನು ಬಯಸಿದವರು ಎಂದು ತಿಳಿಸಿದರು.
ಸಿದ್ಧರಾಮೇಶ್ವರರು ಮಾನವ ಸಮಾಜದ ಚಿಂತಕರು. ಜಲತಜ್ಞರು, ಸ್ತ್ರೀ ಸಮಾನತೆಗೆ ಧ್ವನಿ ಎತ್ತಿದವರು. ಮಹಿಳೆಯನ್ನು ದೈವ ಸ್ವರೂಪದಲ್ಲಿ ನೋಡಿದವರು. ವಚನ ಸಂರಕ್ಷಣೆಯಲ್ಲಿ ಅಗ್ರಜರು. ಸಿದ್ಧರಾಮರ ವಚನಗಳಲ್ಲಿ ಸಮಾಜ ವ್ಯವಸ್ಥೆಯ ಗೊಡ್ಡುತನವನ್ನು, ಹುಸಿನಂಬಿಕೆಗಳನ್ನು, ಹೇಯ ಆಚರಣೆಗಳನ್ನು, ಶತಮಾನಗಳ ಭಯ-ಭ್ರಮೆಗಳನ್ನು ಬಯಲುಮಾಡಿದವರು. ಸಮಾಜದ ವಿಮರ್ಶೆಗೆ ಸಂಬಂಧಿಸಿದ ವಚನಗಳಲ್ಲಿ ಎರಡು ರೀತಿಯ ವೈಶಿಷ್ಯತೆ ಒಂದು ಮೌಢ್ಯ ಸಂಪ್ರದಾಯಗಳನ್ನು ತಿರಸ್ಕರಿಸಿದರೆ, ಮತ್ತೊಂದು ಬದುಕಿನ ಸತ್ಯ ದರ್ಶನ ಮಾಡಿಕೊಡುತ್ತದೆ. ಹಳೆಯದನ್ನು ದೂರಾಚರಣೆಯನ್ನು ತಿರಸ್ಕರಿಸುತ್ತಲೇ ಹೊಸದಕ್ಕೆ ವಾಸ್ತವದ ಬದುಕಿಗೆ ಬೆಲೆಕಟ್ಟಿಕೊಡುವುದರಿಂದ ಅವರ ವಚನಗಳು ಇಂದಿಗೂ ಪ್ರಸ್ತುತವಾಗುತ್ತವೆ.
ಸಮಾಜ ವ್ಯವಸ್ಥೆಯಲ್ಲಿ ಬೇರೂರಿದ ಮೌಢ್ಯತೆ ಅಂಧಾನುಕರಣೆಗಳು ಮತ್ತು ಅವುಗಳನ್ನೆಲ್ಲ ಸ್ವಾರ್ಥಕ್ಕಾಗಿ ಉಪಯೋಗಿಸಿಕೊಂಡು ಕೆಲಪಟ್ಟಭದ್ರ ಹಿತಾಸಕ್ತಿಗಳ ಸೋಗನ್ನು ವಚನಗಳ ಬಯಲು ಮಾಡುತ್ತಾ ವಾಸ್ತವ ಬದುಕಿನ ಸತ್ಯದರ್ಶನವನ್ನು ತೋರಿಸುವುದರಿಂದ ವಚನ ಸಾಹಿತ್ಯದ ಅನಿವಾರ್ಯತೆಯ ಅರಿವು ಮೂಡುತ್ತದೆ.
ಸಿದ್ಧರಾಮ ವಿಡಂಭಿಸುವ ಜಾತಿ ವ್ಯವಸ್ಥೆ, ಕೈಲಾಸದ ಕಲ್ಪನೆ, ಧರ್ಮದೇವರ ಹೆಸರಿನಲ್ಲಿ ನಡೆಯುವ ಅನೇಕ ಹೇಯಾಚರಣೆಗಳು ಇಂದಿಗೂ ನಡೆಯುತ್ತಲೇ ಇವೆ. ಹೀಗಾಗಿ ಈ ವಚನಗಳು ೧೨ನೇಶತಮಾನದಲ್ಲಿ ರಚಿತವಾಗಿದ್ದರೂ ಕೂಡ ಇಂದಿನ ಸಮಾಜ ವ್ಯವಸ್ಥೆಯ ಬದುಕಿಗು ಪ್ರಸ್ತುತವಾಗಿವೆ. ಅಂತೆಯೇ ಸಿದ್ಧರಾಮ ಇಂದಿಗೂ ಅನುಕರುಣೆಗೆ ಯೋಗ್ಯರಾಗಿದ್ದಾರೆ ಎಂದು ವಿಶ್ಲೇಷಿಸಿದರು.
ಜಿಲ್ಲಾ ಭೋವಿಸಂಘದ ಅಧ್ಯಕ್ಷರಾದ ತಿಪ್ಪೇಸ್ವಾಮಿ ಮಾತನಾಡಿ ಸಿದ್ಧರಾಮೇಶ್ವರ ಚಿಂತನೆಗಳನ್ನು ಪ್ರತಿಯೊಬ್ಬರು ರೂಡಿಸಿಕೊಳ್ಳಬೇಕು, ಕಾಯಕದಲ್ಲಿ ಶ್ರದ್ಧೆ ನಿಷ್ಟೆಯನ್ನು ಹೊಂದಿರಬೇಕು. ತಾನುಮಾಡುವ ಕಾಯಕದ ಮೂಲಕ ದೈವತ್ವವನ್ನು ಕಾಣುವಂತಾಗಬೇಕೆಂದು ತಿಳಿಸಿದರು.
ಕಾರ್ಯದರ್ಶಿ ಹೆಚ್.ಲಕ್ಷ್ಮಣ ಮಾತನಾಡಿ ಸಿದ್ಧರಾಮೇಶ್ವರರ ವಚನಗಳನ್ನು ಇಂದಿನ ಯುವಪೀಳಿಗೆ ಅಧ್ಯಯನ ಮಾಡಬೇಕು. ಅಧ್ಯಯನದಿಂದ ಕಂಡುಕೊಂಡ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೇ ಯಶಸ್ವಿ ಜೀವನ ನಡೆಸಲು ಸಾಧ್ಯವೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಭೋವಿಗುರುಪೀಠದ ಸಿಇಓ ಗೌನಹಳ್ಳಿ ಗೋವಿಂದಪ್ಪ, ನಿರ್ದೇಶಕರಾದ ವಡ್ಡರಸಿದ್ದವ್ವನಹಳ್ಳಿ ಪ್ರಕಾಶ್, ಪ್ರಾಚಾರ್ಯ ಭೀಮಭೋವಿ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

What’s your Reaction?
+1
0
+1
0
+1
0
+1
0
+1
0
+1
0
+1
0
Chandravalli Ad Space

ನಿಮ್ಮ ಜಾಹೀರಾತು ನಮ್ಮ ನ್ಯೂಸ್ ಚಾನೆಲ್ ನಲ್ಲಿ ನೀಡಬೆಕೆ? ಈ ಕೇಳಗಿನ ಲಿಂಕ್ ಒತ್ತಿ ನಮ್ಮನ್ನು ಸಂಪರ್ಕಿಸಿ

Leave a Reply

Open chat
ಸಂಪರ್ಕಿಸಿ
%d bloggers like this: