ಸಮಾಜಕ್ಕಾಗಿ ವೈಭೋಗ ತ್ಯಾಗ ಮಾಡಿದ ಶ್ರೇಷ್ಟ ದಾರ್ಶನಿಕ ವೇಮನ: ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ…

ಸಮಾಜಕ್ಕಾಗಿ ವೈಭೋಗ ತ್ಯಾಗ ಮಾಡಿದ ಶ್ರೇಷ್ಟ ದಾರ್ಶನಿಕ ವೇಮನ: ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ…

ಚಿತ್ರದುರ್ಗ:

ಸಮಾಜದ ಒಳತಿಗಾಗಿ ವೈಭೋಗವನ್ನು ತ್ಯಾಗ ಮಾಡಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡ ಶ್ರೇಷ್ಟ ದಾರ್ಶನಿಕ ಮಹಾಯೋಗಿ ವೇಮನ ಎಂದು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ವತಿಯಿಂದ ಕೋವಿಡ್-19ರ ಹಿನ್ನಲೆಯಲ್ಲಿ ಸರಳವಾಗಿ ಆಯೋಜಿಸಲಾಗಿದ್ದ ಮಹಾಯೋಗಿ ವೇಮನ ಜಯಂತಿ ಕಾರ್ಯಕ್ರಮದಲ್ಲಿ ವೇಮನರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.
ಸರಿಯಾದ ದಾರಿಯಲ್ಲಿ ಹೋಗುವ ದೃಷ್ಠಿಯಿಂದ ಮಹನೀಯರ ಜಯಂತಿಗಳನ್ನು ಆಚರಣೆ ಮಾಡಲಾಗುತ್ತಿದೆ. ಹಿರಿಯರು ತೋರಿಸಿಕೊಟ್ಟ ಮಾರ್ಗದರ್ಶನದಲ್ಲಿ ನಾವು ನಡೆಯುವ ಮೂಲಕ ಜೀನವದಲ್ಲಿ ಸಾಕ್ಷಾತ್ಕಾರ ಪಡೆಯಲು ಸಾಧ್ಯವಿದೆ ಎಂದು ಅಭಿಪ್ರಾಯಪಟ್ಟರು.
 ಅಪರ ಜಿಲ್ಲಾಧಿಕಾರಿ ಬಾಲಕೃಷ್ಣ ಮಾತನಾಡಿ, ವೇಮನರು ಸಮಾಜದ ಅಂಕು-ಡೊಂಕುಗಳನ್ನು ತಿದ್ದಿ, ಸಮಾಜದಲ್ಲಿ ಪರಿವರ್ತನೆ ತರುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ. ಅವರ ಆದರ್ಶಗಳು ಸಮಾಜಕ್ಕೆ ದಾರಿದೀಪವಾಗಿದ್ದು, ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸೊಣ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಉಪವಿಭಾಗಾಧಿಕಾರಿ ಡಾ.ನಾಗರಾಜ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರವಿಶಂಕರ್ ರೆಡ್ಡಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ನಿಜಲಿಂಗಪ್ಪ, ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ, ರೆಡ್ಡಿ ಸಮಾಜದ ಕಾರ್ಯದರ್ಶಿ ಜಯರಾಂರೆಡ್ಡಿ ಸೇರಿದಂತೆ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

What’s your Reaction?
+1
0
+1
0
+1
0
+1
0
+1
0
+1
0
+1
0
Chandravalli Ad Space

ನಿಮ್ಮ ಜಾಹೀರಾತು ನಮ್ಮ ನ್ಯೂಸ್ ಚಾನೆಲ್ ನಲ್ಲಿ ನೀಡಬೆಕೆ? ಈ ಕೇಳಗಿನ ಲಿಂಕ್ ಒತ್ತಿ ನಮ್ಮನ್ನು ಸಂಪರ್ಕಿಸಿ

Leave a Reply

Open chat
ಸಂಪರ್ಕಿಸಿ
%d bloggers like this: