ಅನೈತಿಕ ರಾಜಕಾರಣಕ್ಕೆ ರಮೇಶ್ ಜಾರಕಿಹೊಳೆ ಪ್ರಕರಣ ನೇರ ಸಾಕ್ಷಿ, ಗ್ಯಾಸ್, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತು ಬೆಲೆ ಏರಿಕೆಗೆ ವೆಲ್ಫೇರ್ ಪಾರ್ಟಿ ಖಂಡನೆ…

ಅನೈತಿಕ ರಾಜಕಾರಣಕ್ಕೆ ರಮೇಶ್ ಜಾರಕಿಹೊಳೆ ಪ್ರಕರಣ ನೇರ ಸಾಕ್ಷಿ, ಗ್ಯಾಸ್, ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತು ಬೆಲೆ ಏರಿಕೆಗೆ ವೆಲ್ಫೇರ್ ಪಾರ್ಟಿ ಖಂಡನೆ…

ಚಿತ್ರದುರ್ಗ:

ಕೇಂದ್ರ ಸರ್ಕಾರ ಅಗತ್ಯ ವಸ್ತುಗಳಾದ ಅಡುಗೆ ಅನಿಲ, ಪೆಟ್ರೋಲ್, ಡಿಸೇಲ್ ಬೆಲೆ ಹೆಚ್ಚಳ ಮಾಡಿದ್ದು ಖಂಡನೀಯ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯ ಘಟಕದ ಅಧ್ಯಕ್ಷ ತಾಹೀರ್ ಹುಸೇನ್ ಆರೋಪಿಸಿದರು.
ಅವರು ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಹೊಟ್ಟೆ-ಬಟ್ಟೆ ಕಟ್ಟಿ ಜೀವನ ನಡೆಸುತ್ತಿರುವ ಜನ ಈ ಸರ್ಕಾರದ ದುಡ್ಡಿನ ದುರಾಸೆಗೆ ನೆಮ್ಮದಿಯನ್ನೇ ಕಳೆದುಕೊಂಡಿದ್ದಾರೆ. ಬೆಲೆ ಏರಿಕೆಯಿಂದ ದುಡಿದ ಹಣ ಉಳಿಸುವುದಿರಲಿ, ತಿಂಗಳ ಮನೆ ನಿರ್ವಹಣೆ ನಡೆಸುವುದು ಕ?ವಾಗಿದೆ. ಅಂಗೈಯಲ್ಲಿ ಆಕಾಶ ತೋರಿಸುವ, ಮಾತಲ್ಲೇ ಮಂಟಪ ಕಟ್ಟುವ ಬಣ್ಣದ ಮಾತುಗಳು ಜನರ ಹೊಟ್ಟೆ ತುಂಬಿಸುವುದಿಲ್ಲ ಎಂದು ಟೀಕಿಸಿದರು.

ನಿರಂತರವಾಗಿ ತೈಲ ಉತ್ಪನ್ನಗಳ ಬೆಲೆ ಹೆಚ್ಚಳವಾಗಿದ್ದರಿಂದ ಮಧ್ಯಮ ವರ್ಗದವರು, ಬಡವರು ದಿನ ದೂಡುವುದೇ ಕ?ವಾಗಿದೆ. ಆತ್ಮನಿರ್ಭರ ಭಾರತ ಎಂಬುದು ಬರೀ ಹೆಸರಿಗ? ಇದೆ. ಯಾವ ಕ್ಷೇತ್ರದಲ್ಲೂ ದೇಶ ಸ್ವಾವಲಂಬನೆ ಸಾಧಿಸಿಲ್ಲ. ಈ ಸತ್ಯವನ್ನು ಮೋದಿಯವರು ಇನ್ನಾದರೂ ಅರ್ಥ ಮಾಡಿಕೊಳ್ಳಲಿ ಎಂದು ಹೇಳಿದರು.

ಅಚ್ಛೆ ದಿನ್ ತರುವುದಾಗಿ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರವು ಜನರ ಮೇಲೆ ಅನಗತ್ಯ ಬೆಲೆ ಏರಿಕೆ ಹೊರೆಯನ್ನು ಹೊರಿಸಿದೆ. ನಿರಂತರವಾಗಿ ತೈಲೋತ್ಪನ್ನಗಳ ಬೆಲೆ ಹೆಚ್ಚಳವಾಗಿದ್ದರಿಂದ ಮಧ್ಯಮ ವರ್ಗದವರು, ಬಡವರು ದಿನ ದೂಡುವುದೇ ಕ?ವಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಕಡಿಮೆಯಾಗಿದ್ದರೂ ಕೇಂದ್ರ ಸರ್ಕಾರ ಬೆಲೆ ಹೆಚ್ಚಳ ಮಾಡುತ್ತಿದೆ. ನೋಟ್ ಬ್ಯಾನ್, ಲಾಕ್ ಡೌನ್ ನಿಂದಾಗಿ ಜನರು ತತ್ತರಿಸಿದ ಸಂದರ್ಭದಲ್ಲಿಯೂ ಉದ್ಯಮಿಗಳಾದ ಮುಕೇಶ್ ಅಂಬಾನಿ, ಗೌತಮ ಅದಾನಿ ಅವರ ಆಸ್ತಿ ಸಾಕ? ಹೆಚ್ಚಾಗಿದೆ. ಅದಾನಿ ನಿತ್ಯ ೧೨ ಕೋಟಿ ಗಳಿಸುತ್ತಿದ್ದಾರೆ.ಸರ್ಕಾರಿ ಸ್ವಾಮ್ಯದ ಲಾಭದಾಯಕ ಉದ್ಯಮಗಳನ್ನು ತಮ್ಮ ಕಾರ್ಪೊರೇಟ್ ಗೆಳೆಯರಿಗೆ ಮೋದಿ ಅವರು ಅಗ್ಗದ ಬೆಲೆಗೆ ಹಸ್ತಾಂತರಿಸುತ್ತಿದ್ದಾರೆ.

ಕೃಷಿ ಕಾಯ್ದೆಗಳು ರೈತರ ಪರ ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ಮೊದಲಿಗೆ ಉತ್ತರಪ್ರದೇಶ ರಾಜ್ಯದಲ್ಲಿ ಕೃಷಿ ಕಾಯ್ದೆ ಅನು?ನಕ್ಕೆ ತರಲಿ. ಆ ಕಾಯ್ದೆಗಳಿಂದ ಯಾವುದೇ ತೊಂದರೆ ಇಲ್ಲ ಎಂಬುವುದು ರೈತರಿಗೆ ಖಚಿತವಾದ ಮೇಲೆ ದೇಶದಾದ್ಯಂತ ಜಾರಿಗೊಳಿಸಲಿ. ಈ ಕರಾಳ ಕಾಯ್ದೆಗಳ ವಿರುದ್ಧ ಹಳ್ಳಿ-ಹಳ್ಳಿಗೂ ಭೇಟಿ ನೀಡಿ ಜಾಗೃತಿ ಮೂಡಿಸಲು ಚಳವಳಿ ನಡೆಸುತ್ತೇವೆ ಎಂದರು.

ಮೌಲಿಕ ರಾಜಕಾರಣಕ್ಕೆ ಮಾದರಿಯಾಗಿ ಸೇವೆಯ ಮೂಲಕ ಡಬ್ಲುಪಿಐ ಕೆಲಸ ಮಾಡುತ್ತಿದೆ. ಹಲವಾರು ನಗರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿಯಲ್ಲಿ ನಮ್ಮ ಸದಸ್ಯರಿದ್ದಾರೆ. ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲೂ ಸಹ ನಮ್ಮ ಪಕ್ಷ ಸ್ಪರ್ಧೆ ಮಾಡುವುದು ಎಂದು ತಿಳಿಸಿದರು.

ಜಾರಕಿಹೊಳಿ ಪ್ರಕರಣ ಅನೈತಿಕ ರಾಜಕಾರಣಕ್ಕೆ ನೇರ ಸಾಕ್ಷಿಯಾಗಿದೆ. ಇಂತಹದನ್ನು ತಡೆಗಟ್ಟಲು ನೈತಿಕ, ಮೌಲ್ಯಾಧಾರಿತ ರಾಜಕಾರಣದ ಅವಶ್ಯಕತೆ ಇದೆ. ಜನತೆ ನೈತಿಕ ರಾಜಕಾರಣವನ್ನು ಬೆಂಬಲಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ :- ಚಿತ್ರದುರ್ಗ ವೆಲ್ಪೇರ್ ಪಾರ್ಟಿ ಆಫ್ ಇಂಡಿಯಾ, ಜಿಲ್ಲಾ ಸಂಚಾಲಕ ಎಂ.ಹನೀಫ್ ಪೈರೋಜ್‌ಖಾನ್, ಆಸೀಪ್, ಇಮ್ರಾನ್, ರಾಜ್ಯ ಮಾಧ್ಯಮ ಕಾರ್ಯದರ್ಶಿ ಜಾಗಿರ್ದಾರ್ ಹಾಜರಿದ್ದರು.

What’s your Reaction?
+1
0
+1
0
+1
0
+1
0
+1
0
+1
0
+1
0
Chandravalli Ad Space

ನಿಮ್ಮ ಜಾಹೀರಾತು ನಮ್ಮ ನ್ಯೂಸ್ ಚಾನೆಲ್ ನಲ್ಲಿ ನೀಡಬೆಕೆ? ಈ ಕೇಳಗಿನ ಲಿಂಕ್ ಒತ್ತಿ ನಮ್ಮನ್ನು ಸಂಪರ್ಕಿಸಿ

Leave a Reply

Open chat
ಸಂಪರ್ಕಿಸಿ
%d bloggers like this: