ಗೌರವದ ಸ್ಥಾನ, ಜಿಲ್ಲಾ ಗೃಹ ರಕ್ಷಕ ದಳದಲ್ಲಿ ಖಾಲಿ ಇರುವ ಸ್ವಯಂ ಸೇವಕರ ಸದಸ್ಯ ಸ್ಥಾನಕ್ಕೆ ಅರ್ಜಿ ಆಹ್ವಾನ….

ಗೌರವದ ಸ್ಥಾನ, ಜಿಲ್ಲಾ ಗೃಹ ರಕ್ಷಕ ದಳದಲ್ಲಿ ಖಾಲಿ ಇರುವ ಸ್ವಯಂ ಸೇವಕರ ಸದಸ್ಯ ಸ್ಥಾನಕ್ಕೆ ಅರ್ಜಿ ಆಹ್ವಾನ….

ಚಿತ್ರದುರ್ಗ:

ಚಿತ್ರದುರ್ಗ ಜಿಲ್ಲಾ ಗೃಹ ರಕ್ಷಕದಳದಲ್ಲಿ ಖಾಲಿ ಇರುವ ಸ್ವಯಂ ಸೇವಕ ಗೃಹರಕ್ಷಕರ ಸ್ಥಾನಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 15 ಕೊನೆಯ ದಿನವಾಗಿದೆ.
ಜಿಲ್ಲೆಯ ವಿವಿಧ ಘಟಕಗಳಾದ ಚಿತ್ರದುರ್ಗ ಘಟಕದಲ್ಲಿ 2 ಸ್ಥಾನ ಪುರುಷ 2 ಸ್ಥಾನ ಮಹಿಳೆ, ಹಿರಿಯೂರು ಘಟಕದಲ್ಲಿ 2 ಸ್ಥಾನ ಪುರುಷ, 4 ಸ್ಥಾನ ಮಹಿಳೆ, ಹೊಸದುರ್ಗ ಘಟಕದಲ್ಲಿ 2 ಸ್ಥಾನ ಮಹಿಳೆ, ಹೊಳಲ್ಕೆರೆ ಘಟಕದಲ್ಲಿ 1 ಸ್ಥಾನ, ನಂದನಹೊಸೂರು ಘಟಕದಲ್ಲಿ 1, ಮೊಳಕಾಲ್ಮೂರು ಘಟಕದಲ್ಲಿ 1 ಸದಸ್ಯ ಸ್ಥಾನ ಸೇರಿದಂತೆ ಒಟ್ಟು 15 ಗೃಹರಕ್ಷಕ ಸದಸ್ಯರ ಸ್ಥಾನಗಳು ಖಾಲಿ ಇವೆ.
ಖಾಲಿ ಇರುವ ಗೃಹರಕ್ಷಕರ ಗೌರವ ಸದಸ್ಯ ಸ್ಥಾನಗಳಿಗೆ ಅರ್ಹರಿರುವ ಹಾಗೂ ಸ್ವಯಂ ಸೇವಕ ಗೃಹರಕ್ಷಕ ಸದಸ್ಯರಾಗಲು ಇಚ್ಚೆ ಇರುವ ಸೇವಾ ಮನೋಭಾವವುಳ್ಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಾರ್ಚ್ 8 ರಿಂದ ಅರ್ಜಿಗಳನ್ನು ನಗರದ ಮೆದೇಹಳ್ಳಿ ರಸ್ತೆಯಲ್ಲಿರುವ ಜಿಲ್ಲಾ ಗೃಹ ರಕ್ಷಕದಳ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧಪಟ್ಟ ದಾಖಲೆಗಳೊಂದಿಗೆ ಸಮಾದೇಷ್ಟರು, ಜಿಲ್ಲಾ ಗೃಹರಕ್ಷಕದಳ ಕಚೇರಿಗೆ ಮಾರ್ಚ್ 15ರ ಸಂಜೆ 5.30ರೊಳಗೆ ಸಲ್ಲಿಸ ಬೇಕು.
ಅರ್ಹತೆಗಳು: ವಯಸ್ಸು ಕನಿಷ್ಠ 19 ರಿಂದ 45 ವರ್ಷ ಒಳಗಿನವರಿರಬೇಕು, 10ನೇ ತರಗತಿ ಉತ್ತಿರರ್ಣರಾಗಿರಬೇಕು, ಗೃಹರಕ್ಷಕ ಸದಸ್ಯತ್ವಕ್ಕೆ ಸೇರಬಯಸುವ ಅಭ್ಯರ್ಥಿಗಳು ಗರಿಷ್ಟ 5 ಕಿ.ಮೀ. ಒಳಗಿನವರಾಗಿರಬೇಕು. ಅಭ್ಯರ್ಥಿ ಮೇಲೆ ಯಾವುದೇ ಕ್ರಿಮಿನಲ್ ಮೊಕದ್ದಮೆ ದಾಖಲಾಗಿರಬಾರದು, ಯಾವುದೇ ರಾಜಕೀಯ ಪಕ್ಷಗಳಲ್ಲಿ ಗುರುತಿಸಿಕೊಂಡಿರಬಾರದು. ಉತ್ತಮ ದೇಹದಾಡ್ರ್ಯತೆಯನ್ನು ಹೊಂದಿರಬೇಕು, ಪುರುಷರಿಗೆ ಎತ್ತರ 168 ಸೆಂ.ಮೀ, ತೂಕ 50 ಕೆ.ಜಿ, ಮಹಿಳೆಯರಿಗೆ ಎತ್ತರ 158 ಸೆಂ.ಮೀ, 45 ಕೆ.ಜಿ. ತೂಕ ಹೊಂದಿರಬೇಕು ಮತ್ತು ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳಿಗೆ ಅವಕಾಶ ಇರುವುದಿಲ್ಲ ಹಾಗೂ ಸ್ವಯಂ ಸೇವಾ ಮನೋಭಾವದಲ್ಲಿ ಆಸಕ್ತಿ ಇರುವಂತಹ ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿದೆ.
 ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ 08194-231403, ಬೋಧಕರು-8217480417, ಸಹಾಯಕ ಬೋಧಕರು 9481501233ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಗೃಹರಕ್ಷಕದಳ ಸಮಾದೇಷ್ಟರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

What’s your Reaction?
+1
0
+1
0
+1
0
+1
0
+1
0
+1
0
+1
0
Chandravalli Ad Space

ನಿಮ್ಮ ಜಾಹೀರಾತು ನಮ್ಮ ನ್ಯೂಸ್ ಚಾನೆಲ್ ನಲ್ಲಿ ನೀಡಬೆಕೆ? ಈ ಕೇಳಗಿನ ಲಿಂಕ್ ಒತ್ತಿ ನಮ್ಮನ್ನು ಸಂಪರ್ಕಿಸಿ

Leave a Reply

Open chat
ಸಂಪರ್ಕಿಸಿ
%d bloggers like this: