ಇಂದು ಬಜೆಟ್ ಮಂಡನೆ, ಭದ್ರಾ, ಎತ್ತಿನಹೊಳೆ, ನೇರ ರೈಲು ಸೇರಿದಂತೆ ಹಲವು ನಿರೀಕ್ಷೆಗಳನ್ನು ಹುಟ್ಟು ಹಾಕಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ….
ಇಂದು ಬಜೆಟ್ ಮಂಡನೆ, ಭದ್ರಾ, ಎತ್ತಿನಹೊಳೆ, ನೇರ ರೈಲು ಸೇರಿದಂತೆ ಹಲವು ನಿರೀಕ್ಷೆಗಳನ್ನು ಹುಟ್ಟು ಹಾಕಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ….
ಬೆಂಗಳೂರು:
2021-22ನೇ ಸಾಲಿನ ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಸೋಮವಾರ ಮಧ್ಯಾಹ್ನ 12 ಗಂಟೆಗೆ ಮಂಡಿಸಲಿದ್ದು ಹಲವು ನಿರೀಕ್ಷೆಗಳನ್ನು ಹುಟ್ಟು ಹಾಕಿದ್ದಾರೆ.
ಚಿತ್ರದುರ್ಗ ಜಿಲ್ಲೆಯಲ್ಲಿ ಈಗಾಗಲೇ ಅನುಷ್ಠಾನಗೊಳ್ಳುತ್ತಿರುವ ಭದ್ರಾ ಮೇಲ್ದಂಡೆ ಯೋಜನೆ, ಎತ್ತಿನಹೊಳೆ ಯೋಜನೆಗೆ ಅಧಿಕ ಹಣ ನೀಡಿಕೆ, ನೆನೆಗುದಿಗೆ ಬಿದ್ದಿರುವ ದಾವಣಗೆರೆ-ತುಮಕೂರು-ಚಿತ್ರದುರ್ಗ ನೇರ ರೈಲು ಮಾರ್ಗ, ಚಿತ್ರದುರ್ಗ ವೈದ್ಯಕೀಯ ಕಾಲೇಜ್ ಆರಂಭ ಸೇರಿದಂತೆ ಹತ್ತು ಹಲವು ಬೇಡಿಕೆಗಳಿದ್ದು ಇದರಲ್ಲಿ ಎಷ್ಟು ಬೇಡಿಕೆಗಳಿಗೆ ಮುಖ್ಯಮಂತ್ರಿಗಳು ಅನುದಾನ ನೀಡಲಿದ್ದಾರೆ ಎನ್ನುವುದು ತಿಳಿಯಲಿದೆ.
ಬಿ.ಎಸ್ ಯಡಿಯೂರಪ್ಪನವರು 8ನೇ ಬಾರಿಗೆ ರಾಜ್ಯ ಬಜೆಟ್ ಮಂಡಿಸುತ್ತಿದ್ದಾರೆ. 2021-22ನೇ ಸಾಲಿನ ರಾಜ್ಯ ಮುಂಗಡ ಪತ್ರವನ್ನು ಮಂಡಿಸುವುದಾಗಿ ಟ್ವೀಟರ್ ನಲ್ಲಿ ಪ್ರಕಟಿಸಿದ್ದಾರೆ. 2006ರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಆಗಿದ್ದ ಬಿಎಸ್ವೈ 2 ಬಾರಿ ಬಜೆಟ್ ಮಂಡಿಸಿದ್ದರು. ಆ ಬಳಿಕ ರಾಜ್ಯದಲ್ಲಿ ಪೂರ್ಣ ಪ್ರಮಾಣದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದ್ದ ಅವಧಿಯಲ್ಲಿ 4 ಬಾರಿ ಬಜೆಟ್ ಮಂಡನೆ ಮಾಡಿದ್ದನ್ನು ಸ್ಮರಿಸಬಹುದಾಗಿದೆ.