ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳು ಮತ್ತು ಅವರ ಕುಟುಂಬಗಳಿಗೆ ನೆಮ್ಮದಿ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನಿರಂತರ ಪ್ರಯತ್ನಕ್ಕೆ ದೊಡ್ಡ ಯಶಸ್ಸು ಸಿಕ್ಕಿದೆ.
ಕ್ಯಾನ್ಸರ್ ಔಷಧಗಳ ಮೇಲಿನ ವ್ಯಾಪಾರ ಲಾಭಾಂಶವನ್ನು ಗರಿಷ್ಠ ಶೇ.30ಕ್ಕೆ ಸೀಮಿತಗೊಳಿಸುವ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಇದರಿಂದ ಕೆಲವು ಜೀವ ರಕ್ಷಕ ಔಷಧಗಳ ಬೆಲೆ ಶೇ.70ರವರೆಗೆ ಇಳಿಕೆಯಾಗುವ ನಿರೀಕ್ಷೆಯಿದೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಜನಸಾಮಾನ್ಯರಿಗೆ ಆರೋಗ್ಯ ಸೇವೆಯು ಹೊರೆಯಾಗಬಾರದು ಹಾಗೂ ಪ್ರತಿಯೊಬ್ಬರಿಗೂ ಔಷಧಗಳು ಕೈಗೆಟುಕುವ ದರದಲ್ಲಿ ಸಿಗಬೇಕು ಎಂಬುದು ಸರ್ಕಾರದ ಮುಖ್ಯ ಉದ್ದೇಶ ಎಂದಿದ್ದಾರೆ.
ಪ್ರತಿಯೊಬ್ಬರಿಗೂ ಗುಣಮಟ್ಟದ ಹಾಗೂ ಸುಲಭ ದರದಲ್ಲಿ ಆರೋಗ್ಯ ಸೇವೆ ಒದಗಿಸಲು ರಾಜ್ಯ ಸರ್ಕಾರ ಸಂಪೂರ್ಣವಾಗಿ ಬದ್ಧವಾಗಿದೆ ಎಂದು ಅವರು ಪುನರುಚ್ಚರಿಸಿದ್ದಾರೆ.
ಸರ್ಕಾರದ ಈ ಜನಪರ ನಿರ್ಧಾರದಿಂದ ರಾಜ್ಯದ ಲಕ್ಷಾಂತರ ಕ್ಯಾನ್ಸರ್ ರೋಗಿಗಳಿಗೆ ಆರ್ಥಿಕವಾಗಿ ದೊಡ್ಡ ಮಟ್ಟದ ಉಪಶಮನ ಸಿಗಲಿದೆ ಎಂದು ಸಿಎಂ ಡಿ.ಕೆ ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.




