ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ರೈಸ್ ವ್ಯಾಪ್ತಿಯ ಮೊರಾರ್ಜಿ ದೇಸಾಯಿ, ಶ್ರೀಮತಿ ಇಂದಿರಾಗಾಂಧಿ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿ 2026-27ನೇ ಸಾಲಿನ 6ನೇ ತರಗತಿ ಪ್ರವೇಶಾತಿಗೆ ವಿಶೇಷ ವರ್ಗದ ವಿದ್ಯಾರ್ಥಿಗಳಿಗೆ ನೇರ ದಾಖಲಾತಿಗೆ ಅವಕಾಶ ಕಲ್ಪಿಸಲಾಗಿದೆ.
ಅಲೆಮಾರಿ, ಅರೆ ಅಲೆಮಾರಿ, ಸಫಾಯಿ ಕರ್ಮಚಾರಿ, ಸ್ಮಶಾನ ಕಾರ್ಮಿಕ ಮಕ್ಕಳು, ಹೆಚ್‌ಐವಿ ಪೀಡಿತ ಪೋಷಕರ ಮಕ್ಕಳು, ಜೀತ ವಿಮುಕ್ತಿ, ಕಾರ್ಮಿಕ ಮಕ್ಕಳು, ದೇವದಾಸಿಯರ ಮಕ್ಕಳು, ಬಾಲಕಾರ್ಮಿಕರು, ಮಾಜಿ ಸೈನಿಕರ ಮಕ್ಕಳು, ಸಂಚಾರಿ ಕುರಿಗಾಹಿಗಳ ಮಕ್ಕಳು, ಏಕ ಪೋಷಕರ ಮಕ್ಕಳು ಅಥವಾ ವಿಧವೆಯ ಮಕ್ಕಳು ಸಂಬಂಧಪಟ್ಟ ಪ್ರಮಾಣ ಪತ್ರವನ್ನು ತೆಗೆದುಕೊಂಡು ತಮ್ಮ ಹತ್ತಿರದ ವಸತಿ ಶಾಲೆಗೆ ಭೇಟಿ ನೀಡಿ, ಇದೇ ಜೂನ್ 24ರೊಳಗಾಗಿ ನೇರವಾಗಿ ದಾಖಲಾತಿ ಮಾಡಿಕೊಳ್ಳಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.



