ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನ ರಾಜ್ಯ ಮುಖ್ಯ ಆಯುಕ್ತರು ಹಾಗೂ ಮಾಜಿ ಸಚಿವರಾದ ಶ್ರೀ ಪಿ.ಜಿ.ಆರ್. ಸಿಂಧ್ಯಾ ಅವರು ಇಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದರು.
ಬೆಂಗಳೂರಿನ ಸದಾಶಿವನಗರದಲ್ಲಿರುವ ಮುಖ್ಯಮಂತ್ರಿಗಳ ಖಾಸಗಿ ನಿವಾಸದಲ್ಲಿ ಈ ಸೌಜನ್ಯಯುತ ಭೇಟಿ ನಡೆಯಿತು. ಇತ್ತೀಚೆಗೆ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಡಿ.ಕೆ. ಶಿವಕುಮಾರ್ ಅವರಿಗೆ ಪಿ.ಜಿ.ಆರ್. ಸಿಂಧ್ಯಾ ಅವರು ಹೂಗುಚ್ಛ ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ರಾಜ್ಯ ಪರಿಸರ ಪರಿಣಾಮ ವಿಶ್ಲೇಷಣೆ ಪ್ರಾಧಿಕಾರದ ಅಧ್ಯಕ್ಷ ಎ.ಎನ್. ಮಹೇಶ್ ಅವರು ಉಪಸ್ಥಿತರಿದ್ದು, ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಭೇಟಿಯ ವೇಳೆ ರಾಜ್ಯದ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಚಟುವಟಿಕೆಗಳು ಹಾಗೂ ಪರಿಸರ ಇಲಾಖೆಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ಅನೌಪಚಾರಿಕ ಚರ್ಚೆ ನಡೆಯಿತು ಎಂದು ಮೂಲಗಳು ತಿಳಿಸಿವೆ.



