Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಹೋಟೆಲ್; ಅದೃಷ್ಟವಶಾತ್ ಸಿಬ್ಬಂದಿ ಪಾರು

Advertisement
ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಹೋಟೆಲ್; ಅದೃಷ್ಟವಶಾತ್ ಸಿಬ್ಬಂದಿ ಪಾರು
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಿಲಿಕಾನ್ ಸಿಟಿಯಲ್ಲಿ ಬೆಂಕಿ ಅವಘಡಗಳ ಸರಣಿ ಮುಂದುವರಿದಿದ್ದು, ಏಪ್ರಿಲ್ 16 ರಂದು ಗುರುವಾರ ನಗರದ ನೈಸ್ ರಸ್ತೆಯ ಬಳಿ ಮತ್ತೊಂದು ಭೀಕರ ಅಗ್ನಿ ದುರಂತ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಹೋಟೆಲ್ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.

ಘಟನೆಯ ವಿವರ:
ನೈಸ್ ರಸ್ತೆಯ ಸೋಂಪುರ ಸರ್ಕಲ್‌ನಲ್ಲಿರುವ 'ಶುದ್ಧ ತಿಂಡಿ' ಹೋಟೆಲ್‌ನಲ್ಲಿ ಈ ಅವಘಡ ಸಂಭವಿಸಿದೆ. ಹೋಟೆಲ್‌ನಲ್ಲಿದ್ದ ಇಡ್ಲಿ ಸ್ಟೀಮರ್‌ನಲ್ಲಿ ಉಂಟಾದ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಬೆಂಕಿ ಕಾಣಿಸಿಕೊಳ್ಳಲು ಕಾರಣ ಎನ್ನಲಾಗಿದೆ. ಕ್ಷಣಮಾತ್ರದಲ್ಲಿ ಇಡೀ ಹೋಟೆಲ್‌ಗೆ ಬೆಂಕಿ ವ್ಯಾಪಿಸಿದ್ದು, ನೋಡನೋಡುತ್ತಿದ್ದಂತೆಯೇ ಹೋಟೆಲ್ ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗಿದೆ.

ತಪ್ಪಿದ ಭಾರಿ ಅನಾಹುತ:
ಬೆಂಕಿ ಕಾಣಿಸಿಕೊಂಡ ತಕ್ಷಣ ಹೋಟೆಲ್ ಒಳಗಿದ್ದ ಸಿಬ್ಬಂದಿ ಸಮಯಪ್ರಜ್ಞೆ ಮೆರೆದು ಹೊರಬಂದಿದ್ದಾರೆ. ಇದರಿಂದಾಗಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಳೆದ ಮಾರ್ಚ್ ತಿಂಗಳಷ್ಟೇ ಈ ಹೋಟೆಲ್ ಹೊಸದಾಗಿ ಆರಂಭವಾಗಿತ್ತು. ಉದ್ಘಾಟನೆಯಾದ ಕೇವಲ ಒಂದು ತಿಂಗಳಲ್ಲೇ ಇಡೀ ಹೋಟೆಲ್ ಬೆಂಕಿಗೆ ಆಹುತಿಯಾಗಿರುವುದು ಮಾಲೀಕರಿಗೆ ಭಾರಿ ಆರ್ಥಿಕ ನಷ್ಟ ಉಂಟುಮಾಡಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹಿರಿಯೂರು ಉಪಚುನಾವಣೆ: ಶೋಕಿ ನಾಯಕರಿಗೆ ‘ತಕ್ಕ ಪಾಠ’ ಕಲಿಸಲು ಹಿರಿಯೂರು ಮತದಾರ ಸಜ್ಜು!ಲೋಹಿತ್‌ ಕುಮಾರ್ ಪಿ ಅವರಿಗೆ ಪಿಎಚ್.ಡಿ. ಪದವಿ ಪ್ರದಾನ: ಅಭಿನಂದನೆಗಳ ಮಹಾಪೂರಫ್ಯಾಕ್ಟರಿಯಿಂದ ಹೊರಬರುತ್ತಿರುವ ದುರ್ವಾಸನೆ: ದೊಡ್ಡಬಳ್ಳಾಪುರದ ವರದನಹಳ್ಳಿ ಗ್ರಾಮಸ್ಥರು ಹೈರಾಣು!ಗ್ರಾಮ ಪಂಚಾಯಿತಿಯಲ್ಲಿ ರಾತ್ರಿ ವೇಳೆ ರಹಸ್ಯ ಕೆಲಸ: ಗ್ರಾಮಸ್ಥರಲ್ಲಿ ಹೆಚ್ಚಿದ ಕಳ್ಳ ವ್ಯವಹಾರದ ಸಂಶಯ!ಚಿತ್ರದುರ್ಗ ಸಖಿ ಒನ್ ಸ್ಟಾಪ್ ಸೆಂಟರ್: ಸೋಶಿಯಲ್ ವರ್ಕರ್ ಹುದ್ದೆಗೆ ಅರ್ಜಿ ಆಹ್ವಾನಹಿರಿಯೂರು ನಗರಸಭೆ: ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನಮೇ 17ರಂದು ಪೊಲೀಸ್ ಅಧಿಕಾರಿಗಳ ಸ್ನೇಹ ಸಮ್ಮೀಲನಹೊಸ ರೈಲ್ವೆ ಕಾಮಗಾರಿಗಳ ಪರಾಮರ್ಶೆ- ಸಚಿವ ವಿ. ಸೋಮಣ್ಣಇ-ಬಸ್, ಇ-ಟ್ರಾಕ್ ಮತ್ತು ಹಸಿರು ಸಾರಿಗೆ, ಸುಸ್ಥಿರ ಕೈಗಾರಿಕಾ ಭವಿಷ್ಯಕ್ಕೆ ಒತ್ತು:  ಕುಮಾರಸ್ವಾಮಿದೇಶದಲ್ಲಿ ಎಲೆಕ್ಟ್ರಿಕ್ ಬಸ್‌ಗಳ ಸಂಚಾರಕ್ಕೆ ಮತ್ತಷ್ಟು ವೇಗ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ