i
ಪಾದರಾಯನಪುರ ಗಲಭೆಕೋರರ ಇಬ್ಬರಿಗೆ ಕೊರೊನಾ ರೋಗ ದೃಢ, ಸ್ಥಳಾಂತರ ಮಾಡಲು ಸರ್ಕಾರಕ್ಕೆ ಎಚ್ ಡಿಕೆ ಗಡವು..
ಚಂದ್ರವಳ್ಳಿ ನ್ಯೂಸ್ ರಾಮನಗರ
ರಾಮನಗರ ಕಾರಾಗೃಹದಲ್ಲಿ ಇರಿಸಲಾಗಿದ್ದ ಪಾದರಾಯನಪುರದ ಗಲಭೆಕೋರರ ಪೈಕಿ ಮೊಹಮದ್ ಯಾಸಿನ್ ಹಾಗೂ ಮೊಹಮದ್ ಸಬಾಜ್ ಎಂಬ ಇಬ್ಬರಿಗೆ ಕೊರೊನಾ ವೈರಸ್ ತಗುಲಿರುವ ಪಾಸಿಟಿವ್ ವರದಿ ಬಂದಿದೆ. ರಾಮನಗರ ಜೈಲಿನಲ್ಲಿ ಇರಿಸಲಾಗಿರುವ ಕೈದಿಗಳನ್ನು ಸಕಲ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ತಕ್ಷಣವೇ ಸ್ಥಳಾಂತರಿಸದಿದ್ದರೆ ನಾಳೆಯಿಂದ ಉಗ್ರ ಪ್ರತಿಭಟನೆ ಮಾಡುತ್ತೇನೆ ಎಂದು ಎಚ್.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ.
ತಮ್ಮ ಟ್ವಿಟರ್ ಖಾತೆಯಲ್ಲಿ ಈ ವಿಷಯ ಪ್ರಕಟಸಿರುವ ಅವರು,
ಈಗಾಗಲೇ ರಾಜ್ಯದಲ್ಲಿ 445 ಮಂದಿ ಸೋಂಕಿಗೆ ತುತ್ತಾಗಿ, 17 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಎಂಟು ಜಿಲ್ಲೆಗಳು ಮಾತ್ರ ಸೋಂಕು ಮುಕ್ತವಾಗಿವೆ. ಅವುಗಳಲ್ಲಿ ರಾಮನಗರವೂ ಒಂದು. ಇದೀಗ ಸರ್ಕಾರ ತೆಗೆದುಕೊಂಡ ಎಡವಟ್ಟು ನಿರ್ಧಾರದಿಂದ ರಾಮನಗರದಲ್ಲೂ ಸೋಂಕು ಹರಡುವ ಭೀತಿ ಎದುರಾಗಿದೆ ಎಂದು ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ.
ಸರ್ಕಾರ ಸಕಲ ಮುನ್ನೆಚ್ಚರಿಕೆಯಿಂದ ಪರಿಸ್ಥಿತಿ ನಿಭಾಯಿಸದಿದ್ದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ.
ರಾಮನಗರ ಜೈಲ್ ಅನ್ನು ಸಂಪೂರ್ಣ ಕ್ವಾರಂಟೈನ್ ಮಾಡಬೇಕು. ಪೊಲೀಸರು ಸೇರಿದಂತೆ ಜೈಲಿನಲ್ಲಿ ಕಾರ್ಯನಿರ್ವಹಿಸಿದ ಅಡುಗೆ ಮತ್ತು ಸ್ವಚ್ಛತೆ ಯವರು ಸಂಬಂಧಿಸಿದವರ ಆರೋಗ್ಯ ಕಾಪಾಡಲು ಸರ್ಕಾರ ತಕ್ಷಣವೇ ಕಾರ್ಯೋನ್ಮುಖವಾಗಬೇಕು ಎಂದು ಕುಮಾರಸ್ವಾಮಿ ಸರ್ಕಾರಕ್ಕೆ ಟ್ವಿಟರ್ ಮಾಡಿದ್ದಾರೆ.