i
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಯಲು ಸೀಮೆಯ ಬಹುದಿನಗಳ ಕನಸಾಗಿದ್ದ ಭದ್ರಾ ಮೇಲ್ದಂಡೆ ಯೋಜನೆಯನ್ನು ಶೀಘ್ರ ರಾಷ್ಟ್ರೀಯ ಯೋಜನೆಯನ್ನಾಗಿ ಕೇಂದ್ರ ಸರ್ಕಾರ ಸಂಪುಟದಲ್ಲಿ ತೀರ್ಮಾನಿಸಲಿ ಎಂದು ರಾಜ್ಯ ಜಲಸಂಪನ್ಮೂಲ ಸಚಿವ ಎಂ.ಗೋವಿಂದ ಕಾರಜೋಳ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸಚಿವ ಕಾರಜೋಳ ಅವರು ಮಾಧ್ಯಮಗಳೊಂದಿಗೆ ಮಾತನಾಡಿ ಭದ್ರಾ ಯೋಜನೆಗೆ ಈಗಾಗಲೇ ಕೇಂದ್ರ ಹಣಕಾಸು ಇಲಾಖೆ ತಾತ್ವಿಕ ಅನುಮೋದನೆ ನೀಡಿದ್ದರಿಂದಾಗಿ ರಾಷ್ಟ್ರೀಯ ಯೋಜನೆಯ ಮಾನ್ಯತೆ ಪಡೆಯಲು ರಹದಾರಿಯಾಗಿದೆ. ರಾಷ್ಟ್ರೀಯ ಯೋಜನೆ ಘೋಷಣೆ ಬಳಿಕ ಕೇಂದ್ರ ಸರ್ಕಾರದಿಂದ ಯೋಜನೆಯ ವೆಚ್ಚದ ಶೇ 60ರಷ್ಟು ಅನುದಾನ ಸಿಗಲಿದೆ. ಉಳಿದ ಶೇ.40ರಷ್ಟು ಅನುದಾನವನ್ನು ರಾಜ್ಯ ಸರ್ಕಾರ ಭರಿಸಬೇಕಾಗುತ್ತದೆ ಎಂದು ತಿಳಿಸಿದರು.
ಭದ್ರಾ ಮೇಲ್ದಂಡೆ ಯೋಜನೆಯ ಒಟ್ಟು ವೆಚ್ಚ 23 ಸಾವಿರ ಕೋಟಿ ಆಗಿದ್ದು ಇನ್ನೂ 16 ಸಾವಿರ ಕೋಟಿ ರೂ. ವೆಚ್ಚದ ಕೆಲಸ ಬಾಕಿ ಇದೆ. ರಾಷ್ಟ್ರೀಯ ಯೋಜನೆಯಾಗಿ ಘೋಷಣೆಯಾದ ಬಳಿಕ ಉಳಿಯುವ ಒಟ್ಟು ಕಾಮಗಾರಿಯ ವೆಚ್ಚದಲ್ಲಿ ಶೇ 60ರಷ್ಟನ್ನು ಕೇಂದ್ರ ಸರ್ಕಾರವೇ ನೀಡುತ್ತದೆ. ಕೇಂದ್ರದಿಂದ ಸುಮಾರು 5,300 ಕೋಟಿ ಸಿಗುವ ನಿರೀಕ್ಷೆ ಇದೆ ಎಂದು ಕಾರಜೋಳ ವಿಶ್ವಾಸ ವ್ಯಕ್ತ ಪಡಿಸಿದರು.