i
ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಗರ್ಭಿಣಿ ಆಗಲು ನೆರೆಮನೆಯ 56ರ ಅಂಕಲ್ ಕಾರಣ…
ಚಂದ್ರವಳ್ಳಿ ನ್ಯೂಸ್, ಚಾಮರಾಜನಗರ:
ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿರುವ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಪಕ್ಕದ ಮನೆಯ ವ್ಯಕ್ತಿಯ ಸಹವಾಸದಿಂದ ಗರ್ಭಿಣಿಯಾಗಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ.
ಅಪ್ರಾಪ್ತ ಶಾಲಾ ಬಾಲಕಿಯ ಗರ್ಭಿಣಿಗೆ ಕಾರಣವಾಗಿರುವ ಆರೋಪಿ ಮರಿಸ್ವಾಮಿ(56) ಎಂಬುವನನ್ನು ಪೊಲೀಸರು ಈಗ ಬಂಧಿಸಿದ್ದಾರೆ. ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಮರಿಸ್ವಾಮಿ ಅತ್ಯಾಚಾರ ಎಸಗಿದ್ದರಿಂದಾಗಿ ಈಗ ಆ ಬಾಲಕಿ 5 ತಿಂಗಳ ಗರ್ಭಿಣಿಯಾಗಿದ್ದಾಳೆ. ಈ ವಿಷಯವನ್ನು ಬಾಲಕಿ ಮನೆಯವರಿಗೆ ತಿಳಿಸಿದ್ದಾಳೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪರೀಕ್ಷೆ ಮಾಡಿಸಿದಾಗ ವಿದ್ಯಾರ್ಥಿನಿ 5 ತಿಂಗಳ ಗರ್ಭಿಣಿಯಾಗಿರುವುದು ಖಚಿತವಾಗಿದೆ.
ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಸದ್ಯ ಬಾಲಕಿಯನ್ನು ಸಾಂತ್ವನ ಕೇಂದ್ರಕ್ಕೆ ಕಳುಹಿಸಲಾಗಿದೆ.