i
ಮೂರು ದಿನಗಳ ನಂತರ ಮತ್ತೆ ಮಳೆ ಆರ್ಭಟ, ಯೆಲ್ಲೋ ಅಲರ್ಟ್ ಘೋಷಣೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಹಲವು ದಿನಗಳಿಂದ ವರುಣ ಬಿಡುವು ನೀಡಿದ್ದು ಮುಂದಿನ ಮೂರು ದಿನಗಳ ನಂತರ ರಾಜ್ಯದ ವಿವಿಧ ಭಾಗಗಳಲ್ಲಿ ಮತ್ತೆ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನವೆಂಬರ್.2ರ ನಂತರ ರಾಜ್ಯದಲ್ಲಿ ಮತ್ತೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವಮೊಗ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಾಮರಾಜನಗರ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನವೆಂಬರ್.2ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.