i
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಶಿವಮೂರ್ತಿ ಮುರುಘಾ ಶರಣರ ಪೋಕ್ಸೋ ಪ್ರಕರಣದ ಆರೋಪಿ ಪರಮಶಿವಯ್ಯ ಬಂಧನ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕಾರಾಗೃಹದಲ್ಲಿರುವ ಶಿವಮೂರ್ತಿ ಮುರುಘಾ ಶರಣರ ಲೈಂಗಿಕ ದಾಹಕ್ಕೆ ಸಹಕಾರ ನೀಡಿದ ಪೋಕ್ಸೋ ಪ್ರಕರಣದ ಆರೋಪಿ ಎಸ್ ಜೆಎಂ ವಿದ್ಯಾಪೀಠದ ಮಾಜಿ ಕಾರ್ಯದರ್ಶಿ ಪರಮಶಿವಯ್ಯ ಕೊನೆಗೂ ಪೊಲೀಸ್ ಬಲೆಗೆ ಬಿದ್ದಿದ್ದಾರೆ.
ಆರೋಪ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎರಡು ತಿಂಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ನಂತರ ಆರೋಪಿಯನ್ನು ತನಿಖಾ ತಂಡ ಡಿವೈಎಸ್ ಪಿ ಕಚೇರಿಯಲ್ಲಿ ವಿಚಾರಣೆಗೆ ಒಳಪಡಿಸಿತು. ಆರೋಪಿಗೆ ಆರೋಗ್ಯ ಸಮಸ್ಯೆ ಕುರಿತು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ನಡೆಸಲಾಯಿತು.
ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಐವರು ಆರೋಪಿಗಳ ವಿರುದ್ಧ ಪೋಕ್ಸೊ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿ ಆ.28ರಂದು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಧನ ಭೀತಿಯಿಂದ ಆರೋಪಿ ಪರಮಶಿವಯ್ಯ ಕಳೆದ ಎರಡು ತಿಂಗಳಿಂದ ತಲೆಮರೆಸಿಕೊಂಡಿದ್ದರು. ಕೊನೆಗೂ ಪೊಲೀಸರು ಆರೋಪಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.