i
ಗ್ರಾಮ ಪಂಚಾಯಿತಿ ಸದಸ್ಯೆ ಭಾರತಿ ಕಳೆದ ಎರಡು ದಿನಗಳಿಂದ ನಾಪತ್ತೆ…
ಚಂದ್ರವಳ್ಳಿ ನ್ಯೂಸ್, ಮಂಗಳೂರು/ಸುಬ್ರಹ್ಮಣ್ಯ:
ಕಳೆದ ಎರಡು ದಿನಗಳಿಂದ ಗ್ರಾಮ ಪಂಚಾಯಿತಿ ಸದಸ್ಯೆಯೊಬ್ಬಳು ನಾಪತ್ತೆ ಆಗಿರುವ ಘಟನೆ ಮಂಗಳೂರು ಸಮೀಪದ ಸುಬ್ರಹ್ಮಣ್ಯ ಗ್ರಾ.ಪಂ ವ್ಯಾಪ್ತಿಯಲ್ಲಿ ಜರುಗಿದೆ.
ಸುಬ್ರಹ್ಮಣ್ಯ ಗ್ರಾಪಂ ಸದಸ್ಯೆ ಐನೆಕಿದು ಗ್ರಾಮದ ಮೂಕಮಲೆ ಮನೆಯ ಶಶಿಕಾಂತ್ ಎಂಬವರ ಪತ್ನಿ ಭಾರತಿ ಮೂಕಮಲೆ(33) ಅವರು ಅಕ್ಟೋಬರ್. 29ರಂದು ಕಾಣೆಯಾಗಿರುವುದಾಗಿ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪತಿ ಅವರು ದೂರು ದಾಖಲು ಮಾಡಿದ್ದಾರೆ.
ಪತಿ ಶಶಿಕಾಂತ್ ಪತ್ನಿ ಭಾರತಿ ಕಾಣೆಯಾಗಿರುವ ಕುರಿತು ಮಕ್ಕಳಲ್ಲಿ ವಿಚಾರಿಸಿದಾಗ ಎಲ್ಲಿಯೋ ಹೋಗಿ ಬರುವುದಾಗಿ ತಿಳಿಸಿ ಹೋಗಿರುತ್ತಾಳೆ ಎಂದು ತಿಳಿಸಿದ್ದು, ಬಳಿಕ ಪತ್ನಿಗೆ ಕರೆ ಮಾಡಿದಾಗ ಫೋನ್ ಸ್ವೀಚ್ ಆಫ್ ಬರುತ್ತಿದೆ. ಸಂಬಂಧಿಕರು, ಅಕ್ಕಪಕ್ಕದ ಸ್ನೇಹಿತರ ಬಳಿ ವಿಚಾರಿಸಿದಾಗ ಎಲ್ಲಿಯೂ ಪತ್ನಿ ಭಾರತಿ ಪತ್ತೆ ಆಗದಿದ್ದರಿಂದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.