i
ಶಿವಮೂರ್ತಿ ಶರಣರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ 2ನೇ ಪೋಕ್ಸೋ ಕೇಸಲ್ಲಿ ಕಸ್ಟಡಿ ಕೇಳಲು ಸಿದ್ದತೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಶಿವಮೂರ್ತಿ ಮುರುಘಾ ಶರಣರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ 2ನೇ ಪೋಕ್ಸೋ ಪ್ರಕರಣದಲ್ಲಿ ಶರಣರನ್ನ ಪೊಲೀಸ್ ಕಸ್ಟಡಿಗೆ ಕೇಳಲು ಪೊಲೀಸ್ ತನಿಖಾಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.
ಆರೋಪಿ ಶರಣರನ್ನ ಪೊಲೀಸ್ ಕಸ್ಟಡಿಗೆ ನೀಡುವಂತೆ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಕ್ಕೆ ಮನವಿ ಮಾಡಲಿದ್ದಾರೆ. ಸದ್ಯ ಮುರುಘಾ ಶ್ರೀಗಳ 1ನೇ ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅಕ್ಟೋಬರ್ 13 ರಂದು ಶರಣರ ವಿರುದ್ಧ 2ನೇ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಕೋರ್ಟ್ ಅನುಮತಿ ಪಡೆದು ಮುರುಘಾ ಶರಣರನ್ನು ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಬೇಕಿದೆ.
ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರಿಂದ ತನಿಖಾಧಿಕಾರಿ ಸಿಪಿಐ ಬಾಲಚಂದ್ರ ನಾಯ್ಕ್ ನೇತೃತ್ವದಲ್ಲಿ ವಿಚಾರಣೆ ನಡೆಯಲಿದೆ. ಇನ್ನು ಸ್ಥಳದಲ್ಲಿ ಮಹಜರು ಮಾಡಲಾಗಿದೆ. ಜೊತೆಗೆ ಮೆಡಿಕಲ್ ಟೆಸ್ಟ್ ಸೇರಿದಂತೆ ಮತ್ತಿತರ ಪರೀ7ೆಗಳಿಗೆ ಶರಣರನ್ನು ಒಳಪಡಿಸಬೇಕಾಗಿದೆ.