i
15 ವರ್ಷದ ಅಪ್ರಾಪ್ತ ಬಾಲಕಿಗೆ ರೇಪ್ ಮಾಡಿ ಕೊಲೆ ಮಾಡಿದ 16 ವರ್ಷದ ಅಪ್ರಾಪ್ತ ಬಾಲಕ ಬಂಧನ…
ಚಂದ್ರವಳ್ಳಿ ನ್ಯೂಸ್, ಕಲಬುರಗಿ:
15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ರೇಪ್ ಮಾಡಿ ಕೊಲೆ ಮಾಡಿದ ಆರೋಪಿ 16 ವರ್ಷದ ಅಪ್ರಾಪ್ತ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ಕಲಬುರಗಿ ಜಿಲ್ಲೆಯ ಆಳಂದ ಪೊಲೀಸ್ ಠಾಣಾ ವ್ಯಾಪ್ತಿಯ ಕೊರಳ್ಳಿ ಗ್ರಾಮದ ಹೊರವಲಯದಲ್ಲಿ ಆರೋಪಿ ರೇಪ್ ಮಾಡಿ ಕೊಲೆ ಮಾಡಿದ್ದ ಘಟನೆ ನಡೆದಿತ್ತು.
ಸಂತ್ರಸ್ತೆ ಬಾಲಕಿ ಸಾಯಂಕಾಲ ವೇಳೆ ಬಹಿರ್ದೆಸೆಗೆಂದು ಗದ್ದೆಯ ಕಡೆಗೆ ಹೋಗಿದ್ದ ವೇಳೆ ಬಾಲಕ ಆಕೆಯನ್ನು ಎಳೆದುಕೊಂಡು ಹೋಗಿ ಕಬ್ಬಿನ ಗದ್ದೆಯಲ್ಲಿ ಅತ್ಯಾಚಾರ ಮಾಡಿದ್ದಲ್ಲದೆ ನಂತರ ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದನು. ಅಫಜಲಪುರ ತಾಲೂಕಿನ 15 ವರ್ಷದ ಬಾಲಕಿ ಕೊರಳ್ಳ ಗ್ರಾಮದ ಸಂಬಂಧಿಕರ ಮನೆಯಲ್ಲಿದ್ದುಕೊಂಡು ಶಾಲೆಗೆ ಹೋಗುತ್ತಿದ್ದಳು. ಅತ್ಯಾಚಾರವೆಸಗಿ ಕೊಲೆ ಮಾಡಿರಬಹುದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಕಲಬುರಗಿ ಎಸ್ ಪಿ ಇಶಾ ಪಂತ್ ಅವರು ಪ್ರಕರಣ ಭೇದಿಸಿದ ಪೊಲೀಸ್ ಸಿಬ್ಬಂದಿಗಳಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ. ಅಲ್ಲದೆ ಬಂಧಿತ ಆರೋಪಿಯ ವಿಚಾರಣೆ ನಡೆಯುತ್ತಿದ್ದು ಶೀಘ್ರ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.