i
ಶಿವಮೂರ್ತಿ ಶರಣರು 3 ದಿನ ಪೊಲೀಸ್ ಕಸ್ಟಡಿಗೆ, ವಾರ್ಡನ್ ರಶ್ಮಿ ಬಂಧನ ಅವಧಿ ವಿಸ್ತರಣೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಶಿವಮೂರ್ತಿ ಮುರುಘಾ ಶರಣರ ಪ್ರಕರಣದಲ್ಲಿ 2ನೇ ಪೋಕ್ಸೋ 3 ದಿನ ಪೊಲೀಸ್ ಕಸ್ಟಡಿಗೆ ನೀಡಿ ಚಿತ್ರದುರ್ಗದ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶ ಹೊರಡಿಸಿದೆ.
ಮುರುಘಾ ಶರಣರು ನವೆಂಬರ್ 5ರವರೆಗೆ ಪೊಲೀಸ್ ಕಸ್ಟಡಿಯಲ್ಲೇ ಇರಬೇಕಾಗಿದೆ. ಗ್ರಾಮಾಂತರ ಠಾಣೆ ಸಿಪಿಐ ಬಾಲಚಂದ್ರ ನಾಯ್ಕ್ ನೇತೃತ್ವದಲ್ಲಿ ಡಿವೈಎಸ್ಪಿ ಕಚೇರಿಗೆ ಶರಣರನ್ನ ಕರೆದೊಯ್ದು ವಿಚಾರಣೆ ಮಾಡುವ ಸಾಧ್ಯತೆ ಇದೆ.
ಪೋಕ್ಸೋ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಶಿವಮೂರ್ತಿ ಮುರುಘಾ ಶರಣರು ಮತ್ತು ಇತರ ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ನವೆಂಬರ್-8ರವರೆಗೆ ನಗರದ 2ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯವು ವಿಸ್ತರಿಸಿದೆ.
ಪ್ರಕರಣದ ಎ1 ಆರೋಪಿ ಡಾ. ಶಿವಮೂರ್ತಿ ಮುರುಘಾ ಶರಣರು, ಎ2 ಆರೋಪಿ ಮಹಿಳಾ ವಾರ್ಡನ್ ರಶ್ಮಿ ಹಾಗೂ ಎ3 ಆರೋಪಿ ಪರಮಶಿವಯ್ಯ ಅವರ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಿಸಿ ನ್ಯಾಯಾಲಯವು ಆದೇಶ ಹೊರಡಿಸಿದೆ.
ಪೋಕ್ಸೋ ಪ್ರಕರಣದ ಆರೋಪಿಗಳನ್ನು 8 ದಿನಗಳ ಪೊಲೀಸ್ ಕಸ್ಟಡಿಗೆ ನೀಡುವಂತೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ನ್ಯಾಯಾಲಯಕ್ಕೆ ಕೇಳಿದ್ದು ಪೊಲೀಸರ ಕೋರಿಕೆಗೆ ಮುರುಘಾ ಶರಣರ ಪರ ವಕೀಲರು ತಕರಾರು ಅರ್ಜಿ ಸಲ್ಲಿಸಿದ್ದರು.