i
ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಬ್ಲೂಟೂತ್ ಡಿವೈಸ್ ಬಳಸಿದ ಅಭ್ಯರ್ಥಿ ಸುಪ್ರಿಯಾ ಬಂಧನ…
ಚಂದ್ರವಳ್ಳಿ ನ್ಯೂಸ್, ಕಲಬುರಗಿ:
ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮವಾಗಿ ಡಿವೈಸ್ ಬಳಸಿ ಪರೀಕ್ಷೆ ಬರೆದ ಅಭ್ಯರ್ಥಿಯೊಬ್ಬಳನ್ನು ತನಿಖಾ ತಂಡದ ಪೊಲೀಸರು ಬಂಧಿಸಿದ್ದಾರೆ.
ಸಿಐಡಿ ಅಧಿಕಾರಿಗಳ ತಂಡವು ಜೇವರ್ಗಿ ತಾಲೂಕಿನ ಸುಪ್ರಿಯಾ ಮಲ್ಲಿಕಾರ್ಜುನ ಹುಂಡೆಕರ್(26) ಎಂಬ ಆರೋಪಿಯನ್ನ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದೆ.
ಆರೋಪಿ ಸುಪ್ರಿಯಾ ಸರ್ಕಾರಿ ಪದವಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಬ್ಲೂಟೂತ್ ಡಿವೈಸ್ ಬಳಸಿ ಪರೀಕ್ಷೆ ಬರೆದಿರುವ ಆರೋಪ ಕೇಳಿ ಬಂದಿತ್ತು. ಈ ಪ್ರಕರಣದಡಿ ಸುಪ್ರಿಯಾ ಅವರನ್ನು ಸಿಐಡಿ ತನಿಖಾಧಿಕಾರಿಗಳಾದ ಶಂಕರಗೌಡ ಪಾಟೀಲ, ಪ್ರಕಾಶ ರಾಠೋಡ ಅವರು ವಶಕ್ಕೆ ಪಡೆದಿದ್ದಾರೆ.
ಬ್ಲೂಟೂತ್ ಡಿವೈಸ್ ಬಳಸಿ ಪಿಎಸ್ಐ ನೇಮಕ ಪರೀಕ್ಷೆ ಬರೆದ ಸುಪ್ರಿಯಾ ಅವರ ಮೇಲಿದ್ದ ಸಂಶಯ ಖಚಿತವಾದ ಕಾರಣ ವಶಕ್ಕೆ ಪಡೆದು, ವಿಚಾರಣೆ ನಡೆಸಲಾಗುತ್ತಿದೆ ಎಂದು ಸಿಐಡಿ ತನಿಖಾಧಿಕಾರಿ ತಂಡ ಮಾಹಿತಿ ನೀಡಿದೆ.