i
ಇಂದಿನಿಂದ ನವೆಂಬರ್-6ರ ತನಕ ಭಾರೀ ಮಳೆ ಸಾಧ್ಯತೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಮತ್ತು ಬದಲಾದ ಹವಾಮಾನದಿಂದಾಗಿ ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ನವೆಂಬರ್-6ರ ತನಕ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನವೆಂಬರ್-6ರ ತನಕ ಮಳೆ ಮುಂದುವರೆಯಲಿದೆ.
ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ನವೆಂಬರ್ 6ರವರೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.