i
ನವೆಂಬರ್-8ರಂದು ಮುಖ್ಯಮಂತ್ರಿಗಳ ಜಿಲ್ಲಾ ಪ್ರವಾಸ ಕಾರ್ಯಕ್ರಮ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದೇ ನವೆಂಬರ್ 8ರಂದು ಒಂದು ದಿನ ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಮುಖ್ಯಮಂತ್ರಿಗಳು ಅಂದು ಸಂಜೆ 4.30ಕ್ಕೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕು ಮೋಟೆಬೆನ್ನೂರು ಹೆಲಿಪ್ಯಾಡ್ನಿಂದ ಹೆಲೆಕಾಪ್ಟರ್ ಮೂಲಕ ಹೊರಟು, ಸಂಜೆ 5.10ಕ್ಕೆ ಹೊಸದುರ್ಗ ತಾಲ್ಲೂಕಿನ ನೀರಗುಂದ ಗೇಟ್ ಸಮೀಪದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಆವರಣದ ಹೆಲೆಪ್ಯಾಡ್ಗೆ ಆಗಮಿಸುವರು. ನಂತರ ಸಾಣೇಹಳ್ಳಿಯಲ್ಲಿ ಶ್ರೀ ಶಿವಕುಮಾರ ಕಲಾ ಸಂಘದ ವತಿಯಿಂದ ಆಯೋಜಿಸಿರುವ ನಾಟಕೋತ್ಸವ ಸಮಾರೋಪ ಸಮಾರಂಭದಲ್ಲಿ ಭಾಗಹಿಸುವರು. ರಾತ್ರಿ 8.30ಕ್ಕೆ ಹೊಸದುರ್ಗ ತಾಲ್ಲೂಕು ಸಾಣೇಹಳ್ಳಿಯಿಂದ ರಸ್ತೆ ಮೂಲಕ ದಾವಣಗೆರೆ ಪ್ರಯಾಣ ಬೆಳೆಸಿ, ದಾವಣಗೆರೆಯಲ್ಲಿ ವಾಸ್ತವ್ಯ ಮಾಡುವರು ಎಂದು ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯಾಧಿಕಾರಿ ಬಿ.ಪಿ.ಚನ್ನಬಸವೇಶ ತಿಳಿಸಿದ್ದಾರೆ.