i
ಜೂಜು ಅಡ್ಡೆಯ ಮೇಲೆ ಪೊಲೀಸರ ದಾಳಿ, ಪೊಲೀಸ್ ಪೇದೆ ಸೇರಿ 5 ಮಂದಿ ಬಂಧನ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜೂಜು ಅಡ್ಡೆಯ ಮೇಲೆ ಚಿತ್ರದುರ್ಗ ನಗರ ಠಾಣೆ ಪೊಲೀಸರು ದಾಳಿ ಮಾಡಿ ಜೂಜಾಟದಲ್ಲಿ ತೊಡಗಿದ್ದ ಪೊಲೀಸ್ ಪೇದೆ ಸೇರಿದಂತೆ ಐದು ಮಂದಿ ಜೂಜುಕೋರರ ಬಂಧಿಸಲಾಗಿದೆ.
ಚಿತ್ರದುರ್ಗ ನಗರದ ವೆಂಕಟೇಶ್ವರ ಟಾಕೀಸ್ ಹಿಂಭಾಗದಲ್ಲಿ ಗೌಪ್ಯ ಸ್ಥಳ ಒಂದರಲ್ಲಿ ಜಾಜಾಡುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ 1 ಲಕ್ಷದ 53 ಸಾವಿರದ 500 ನಗದು ಹಣ, 2 ಮೊಬೈಲ್, ಗ್ರಾಮಾಂತರ ಠಾಣೆ ಪೊಲೀಸ್ ಪೇದೆ ತಿಪ್ಪೇಸ್ವಾಮಿ ಸೇರಿದಂತೆ ಐದು ಮಂದಿ ಜೂಜುಕೋರರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿತ್ರದುರ್ಗ ನಗರ ಪೊಲೀಸ್ ಠಾಣೆಯ ಸಿಪಿಐ ತಿಪ್ಪೇಸ್ವಾಮಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಚಿತ್ರದುರ್ಗ ನಗರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.