i
ಲಕ್ಷಕ್ಕೂ ಅಧಿಕ ಉದ್ಯೋಗ ಭರ್ತಿಗೆ ಸಿದ್ಧತೆ, ಕೆಎಎಸ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಸರ್ಕಾರವು ಒಂದು ಲಕ್ಷಕ್ಕೂ ಅಧಿಕ ಉದ್ಯೋಗ ಭರ್ತಿಗೆ ಸಿದ್ಧತೆ ನಡೆಸುತ್ತಿರುವುದರಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ದ ವತಿಯಿಂದ ಕೆಎಎಸ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ನಿರ್ಧರಿಸಿದೆ.
ಆಸಕ್ತರು ಅಕ್ಟೋಬರ್ 11 ರೊಳಗಾಗಿ ಬೆಳಗ್ಗೆ 10.00 ಗಂಟೆಯಿಂದ ಸಂಜೆ 4.00 ಗಂಟೆಯವರೆಗೆ ಕಛೇರಿ ದಿನಗಳಂದು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 / 9964760090 ದೂರವಾಣಿ ಸಂಖ್ಯೆಯನ್ನು ತರಬೇತಿಗೆ ಸೇರಬಯಸುವ ಅಭ್ಯರ್ಥಿಗಳು ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವ ಡಾ. ಎ. ಖಾದರ್ ಪಾಷ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.