i
ಗ್ರೂಪ್ ‘ಸಿ’ ವೃಂದ ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಪ್ರಕಟ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚಿಸಲಾದ ವಿವಿಧ ಇಲಾಖೆಗಳಲ್ಲಿನ ಗ್ರೂಪ್ ‘ಸಿ’ ವೃಂದದ ಹುದ್ದೆಗಳ ನೇಮಕಾತಿ ಸಂಬಂಧ ಆಯುಷ್ ಇಲಾಖೆಯಲ್ಲಿನ ಔಷಧ ವಿತರಕರು (Pharmacist) – 60 (03ಬ್ಯಾ.ಲಾ+ 57 ಹೈ.ಕ) ಹುದ್ದೆಗಳು ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿನ ಮೊರಾರ್ಜಿ ದೇಸಾಯಿ / ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗಳಲ್ಲಿನ ಚಿತ್ರಕಲಾ ಶಿಕ್ಷಕರು (ಡಿಪ್ಲೊಮಾದವರಿಗೆ) 182+48 (ಹೈ.ಕ) ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿ ಮತ್ತು ಕಟ್-ಆಫ್ ಅಂಕಗಳನ್ನು ಅಕ್ಟೋಬರ್ 10 ರಂದು ಆಯೋಗದ ವೆಬ್ಸೈಟ್ http://kpsc.kar.nic.in/Lists ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಲೋಕ ಸೇವಾ ಆಯೋಗದ ಕಾರ್ಯದರ್ಶಿ ಸುರಳ್ಕರ್ ವಿಕಾಸ್ ಕಿಶೋರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.