i
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸ್ಥಳದಲ್ಲೇ 5 ಮಂದಿ ಸಾವು…
ಚಂದ್ರವಳ್ಳಿ ನ್ಯೂಸ್, ಮುಂಬೈ:
ಮುಂಬೈ-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ 5 ಮಂದಿ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ಜರುಗಿದೆ.
ಅಪಘಾತದಲ್ಲಿ ಇನ್ನೂ ಮೂವರು ಮಂದಿಯ ಸ್ಥಿತಿ ಗಂಭೀರವಾಗಿದೆ. ಮಹಾರಾಷ್ಟ್ರದ ಖೋಪೋಲಿ ಪ್ರದೇಶದ ಬಳಿ ಮುಂಬೈ ಪುಣೆ ಎಕ್ಸ್ಪ್ರೆಸ್ವೇಯಲ್ಲಿ ಶುಕ್ರವಾರ ಬೆಳಿಗ್ಗೆ ಕಾರೊಂದು ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ, 3 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.ಇವರಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು ಕಾಮೋಥೆಯ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.