i
ದೊಡ್ಡ ಚೆಲ್ಲೂರು ಗ್ರಾಮ ವಾಸ್ತವ್ಯ ಉದ್ಘಾಟಿಸಿದ ಶಾಸಕ ರಘುಮೂರ್ತಿ…
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ಅವರು ಚಳ್ಳಕೆರೆ ತಾಲೂಕಿನ ದೊಡ್ಡಚೆಲ್ಲೂರು ಗ್ರಾಮದಲ್ಲಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿದರು.
ಚಿತ್ರದುರ್ಗ ಜಿಲ್ಲಾಡಳಿತ, ಚಳ್ಳಕೆರೆ ತಾಲೂಕು ಆಡಳಿತ ವತಿಯಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಕಾರ್ಯಕ್ರಮದಡಿ ದೊಡ್ಡಚೆಲ್ಲೂರು ಗ್ರಾಮ ಪಂಚಾಯಿತಿ ಮತ್ತು ತಾಲೂಕು ಮಟ್ಟದ ಕಂದಾಯ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.
ಶಾಸಕ ರಘುಮೂರ್ತಿ ನೇತೃತ್ವದಲ್ಲಿ ನಡೆದ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಗ್ರಾಮದ ಹಲವು ಸಮಸ್ಯೆಗಳನ್ನು ಸ್ಥಳದಲ್ಲೇ ನಿವಾರಿಸಲಾಯಿತು.
ಈ ಸಂದರ್ಭದಲ್ಲಿ ದಂಡಾಧಿಕಾರಿ ರಘುಮೂರ್ತಿ ಮತ್ತು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಹೊನ್ನೇಶ್, ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಮತ್ತು ಗ್ರಾಮ ಪಂಚಾಯಿತಿ ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿ ಅಧ್ಯಕ್ಷ ಸುಮಾ, ಉಪಾಧ್ಯಕ್ಷ ಪ್ರಸನ್ನಕುಮಾರ್, ಗ್ರಾಮ ಪಂಚಾಯಿತಿ ಸದಸ್ಯರು, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಿದಾನಂದಪ್ಪ , ಮುಖಂಡರುಗಳಾದ ಚೆನ್ನಕೇಶವ ನಾಗರಾಜ್ ಅನಿಲ್ ಕುಮಾರ್, ರೈತ ಮುಖಂಡರು, ಮುಖಂಡರು , ಕಾರ್ಯಕರ್ತರು ಮತ್ತು ಸಾರ್ವಜನಿಕರು ಮುಂತಾದವರು ಉಪಸ್ಥಿತರಿದ್ದರು.