i
ಭೀಕರ ರಸ್ತೆ ಅಪಘಾತ 7 ಮಕ್ಕಳು ಸೇರಿ 15 ಮಂದಿ ದುರ್ಮರಣ…
ಚಂದ್ರವಳ್ಳಿ ನ್ಯೂಸ್, ಬಿಹಾರ:
ಭೀಕರ ರಸ್ತೆ ಅಪಘಾತದಲ್ಲಿ 15 ಜನರು ಸಾವನ್ನಪ್ಪಿರುವ ಘಟನೆ ಬಿಹಾರದ ವೈಶಾಲಿ ಜಿಲ್ಲೆ ಮೆಹನಾರ್ನಲ್ಲಿ ನಡೆದಿದೆ. ಟ್ರಕ್ ಚಾಲಕ ಕುಡಿದ ಅಮಲಿನಲ್ಲಿ ವಾಹನ ಚಲಾಯಿಸುತ್ತಿದ್ದ ಅಪಘಾತ ಸಂಭವಿಸಿದ್ದು ಈ ದುರಂತದಲ್ಲಿ 7 ಮಕ್ಕಳು ಸೇರಿ 15 ಜನ ಸಾವನ್ನಪ್ಪಿದ್ದಾರೆ. ರಸ್ತೆ ಬದಿಯ ಜನವಸತಿ ಪ್ರದೇಶಕ್ಕೆ ಟ್ರಕ್ ನುಗ್ಗಿದ ಪರಿಣಾಮ ಅಪಘಾತ ಸಂಭವಿಸಿದೆ.
ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಉಪವಿಭಾಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈಶಾಲಿ ಜಿಲ್ಲೆಯ ದೇಸರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವೇಗವಾಗಿ ಬಂದ ಟ್ರಕ್, ಮಕ್ಕಳ ಸಹಿತ ಹಲವರ ಮೇಲೆ ಹರಿದಿದೆ. ಭೂಯಾನ್ ಬಾಬಾರವರ ಪೂಜೆ ಹಿನ್ನೆಲೆ ಔತಣಕೂಟ ಮುಗಿಸಿ ಎಲ್ಲರೂ ಹಿಂತಿರುಗುತ್ತಿದ್ದರು. ಈ ವೇಳೆ ಪೀಪಲ್ ಟ್ರೀ ಬಳಿ ನಿಂತಿದ್ದ ಜನರ ಮೇಲೆ ಟ್ರಕ್ ಹರಿದಿದೆ.
ಮುಖ್ಯಮಂತ್ರಿ ನಿತೀಶ್ ಕುಮಾರ್ ಘಟನೆಗೆ ವಿಷಾದ ವ್ಯಕ್ತಪಡಿಸಿ ಅಪಘಾತ ದುರಂತವಾಗಿದೆ. ಮೃತರ ಕುಟುಂಬಗಳಿಗೆ ನಿಗದಿತ ಪ್ರಾಮಾಣಿತ ವಿಧಾನದ ಪ್ರಕಾರ ಎಕ್ಸ್ ಗ್ರೇಷಿಯಾ ಅನುದಾನ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ಘೋಷಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ವ್ಯಕ್ತಪಡಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ಟ್ವೀಟ್ ಮಾಡಿದ್ದಾರೆ. ಮೃತರ ಕುಟುಂಬಗಳಿಗೆ 2 ಲಕ್ಷ ರೂಪಾಯಿ, ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರವನ್ನು ಮೋದಿ ಅವರು ಘೋಷಿಸಿದ್ದಾರೆ. ರಾಷ್ಟ್ರಪತಿ ಅವರು ಸಂತಾಪ ಸೂಚಿಸಿದ್ದಾರೆ.