i
ನವೆಂಬರ್.24ರಂದು ನಗರಸಭೆ ಕೌನ್ಸಿಲ್ ಸಾಮಾನ್ಯ ಸಭೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರಸಭೆ ಕೌನ್ಸಿಲ್ ಸಾಮಾನ್ಯ ಸಭೆಯನ್ನು ಇದೇ ನವೆಂಬರ್ 24ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರಸಭೆಯ ನೂತನ ಕೌನ್ಸಿಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ನಗರಸಭೆ ಅಧ್ಯಕ್ಷೆ ತಿಪ್ಪಮ್ಮ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತ ಹನುಮಂತರಾಜು ತಿಳಿಸಿದ್ದಾರೆ.