i
ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
2023ರ ವಿಧಾನಸಭಾ ಚುನಾವಣೆ ಸಮೀಪ ಆಗುತ್ತಿದ್ದಂತೆ ರಾಜಕೀಯ ಮೇಲಾಟ ನಡೆಯುತ್ತಿದ್ದು ಪಕ್ಷಾಂತರ ಪರ್ವ ಬಿರುಸುಗೊಂಡಿದೆ. ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಹಿರೇಕೇರೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಯು ಬಿ ಬಣಕಾರ್, ತುಮಕೂರು ಗ್ರಾಮಾಂತರ ಜೆಡಿಎಸ್ ಮಾಜಿ ಶಾಸಕ ಎಚ್ ನಿಂಗಪ್ಪ, ಬಿಜಾಪುರದ ಮಲ್ಲಿಕಾರ್ಜುನ ರೋಣಿ ಹಾಗೂ ಕೂಡ್ಲಗಿಯ ಜೆಡಿಎಸ್ ಮುಖಂಡ ಡಾ. ಎನ್ ಟಿ ಶ್ರೀನಿವಾಸ್ ಅವರುಗಳು ಅಪಾರ ಬೆಂಬಲಿಗರೊಙದಿಗೆ ಕಾಂಗ್ರೆಸ್ ಪಕ್ಷಕ್ಜೆ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್, ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್ ಹಾಗೂ ಇತರ ನಾಯಕರು ಪಕ್ಷದ ಬಾವುಟ ನೀಡಿ ಸ್ವಾಗತಿಸಿದರು.