i
ರಾಜ್ಯದಲ್ಲಿ ಮೂರು ದಿನ ಮಳೆ, ಚಳಿ ಜಾಸ್ತಿ ಇರಲಿದೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು;
ರಾಜ್ಯದ ಹಲವು ಜಿಲ್ಲೆಗಳಲ್ಲಿ ನವೆಂಬರ್-22 ರಿಂದ 24ರವರೆಗೆ ಅಂದರೆ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಳೆ ಬೀಳಲಿದೆ. ಜೊತೆಯಲ್ಲಿ ಮೋಡ ಮುಚ್ಚಿದ ವಾತಾವರಣ ಸದಾ ಇರಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ವಿಜಯಪುರ, ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.