i
ಪ್ರಥಮ ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ…
ಚಂದ್ರವಳ್ಳಿ ನ್ಯೂಸ್, ಮೈಸೂರು, ಬೆಂಗಳೂರು:
ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಮಾಸ್ಟರ್ ಆಫ್ ವಿಜ್ಯುಯಲ್ ಆಟ್ಸ್(ಎಂ.ವಿ.ಎ) (ಎರಡು ಶೈಕ್ಷಣಿಕ ವರ್ಷದ ನಾಲ್ಕು ಸೆಮಿಸ್ಟರ್ ಸಿ.ಬಿ.ಸಿ.ಎಸ್ ಪದ್ದತಿ) ದೃಶ್ಯ ಕಲೆಯಲ್ಲಿ 2022-23ನೇ ಶೈಕ್ಷಣಿಕ ಸಾಲಿಗೆ ಪ್ರಥಮ ಸ್ನಾತಕೋತ್ತರ ಪದವಿ ಪ್ರವೇಶಾತಿಗಾಗಿ ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಸದರಿ ಸ್ನಾತಕೋತ್ತರ ಪದವಿಯಲ್ಲಿ ಚಿತ್ರಕಲೆ ಮತ್ತು ಶಿಲ್ಪಕಲೆ ವಿಭಾಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕೋತ್ತರ ಪದವಿಯಾಗಿರುತ್ತದೆ. ಪ್ರಥಮ ಮಾಸ್ಟರ್ ಆಫ್ ವಿಜ್ಯುಯಲ್ ಆಟ್ಸ್(ಎಂ.ವಿ.ಎ) ಪ್ರವೇಶತಿಗಾಗಿ ಅರ್ಜಿ ಸಲ್ಲಿಸಲು 24ನೇ ನವೆಂಬರ್ 2022 ರಂದು ಅಂತಿಮ ದಿನಾಂಕವಾಗಿದ್ದು, ದಿನಾಂಕ 25ನೇ ನವೆಂಬರ್ 2022 ರಂದು ಬೆಳಿಗ್ಗೆ 11-00 ಗಂಟೆಗೆ ಅರ್ಹತಾ ಪರೀಕ್ಷೆ ಹಾಗೂ ಮಧ್ಯಾಹ್ನ 02-00 ಗಂಟೆಗೆ ವೈಯಕ್ತಿಕ ಸಂದರ್ಶನ ಇರುತ್ತದೆ.
ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸರ್ಕಾರದ ಅಂತರ್ಜಾಲತಾಣ ವಿಳಾಸ, http://www.mysore.nic.in ಮತ್ತು http://www.cavamysore.karnataka.gov.in ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯದ ದೂರವಾಣಿ ಸಂಖ್ಯೆ 0821-2438931ನ್ನು ಸಂಪರ್ಕಿಸಲು ಅಧಿಕೃತ ಪ್ರಕಟಣೆ ತಿಳಿಸಿದೆ.