i
ನ.25ರಂದು ಶಿಕ್ಷಕರಿಗೆ ಸಹಪಠ್ಯ ಚಟುವಟಿಕೆ ಸ್ಪರ್ಧೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2022-23ನೇ ಸಾಲಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಸಹಪಠ್ಯ ಚಟುವಟಿಕೆಗಳ ಸ್ಪರ್ಧೆಯನ್ನು ಇದೇ ನವೆಂಬರ್ 25ರಂದು ಬೆಳಿಗ್ಗೆ 10ಕ್ಕೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಅನುಪಮಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾಗಿದೆ.
ಚಿತ್ರದುರ್ಗ ತಾಲ್ಲೂಕಿನ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಂದ ಆಸಕ್ತಿಯುಳ್ಳ ಶಿಕ್ಷಕರು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಬಿಇಒ ಕಚೇರಿಯ ಶಿಕ್ಷಣ ಸಂಯೋಜಕ ಎಂ.ಆರ್.ನಾಗರಾಜ್ ಮೊಬೈಲ್ ಸಂಖ್ಯೆ 9620064547 ಗೆ ಸಂಪರ್ಕಿಸಬಹುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚಿತ್ರದುರ್ಗ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ.