i
ಜಿ.ಪಂ. ಸಾಮಾನ್ಯ ಸಭೆ ನ. 25 ಕ್ಕೆ ಮುಂದೂಡಿಕೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆ ನ. 25 ರಂದು ಬೆಳಿಗ್ಗೆ 10 ಗಂಟೆಗೆ ಜಿ.ಪಂ. ಮುಖ್ಯ ಸಭಾಂಗಣದಲ್ಲಿ ನಡೆಯಲಿದೆ.
ನ. 24 ರಂದು ಜಿ.ಪಂ. ಸಾಮಾನ್ಯ ಸಭೆ ನಡೆಸಲು ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ ಅನಿವಾರ್ಯ ಕಾರಣಗಳಿಂದ, ಸಭೆಯನ್ನು ಮುಂದೂಡಿ, ನ. 25 ಕ್ಕೆ ನಡೆಸಲು ನಿಗದಿಪಡಿಸಲಾಗಿದೆ. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಯೂ ಆಗಿರುವ ಆರ್ಥಿಕ ಇಲಾಖೆ (ವೆಚ್ಚ) ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಪಿ.ಸಿ. ಜಾಫರ್ ಅವರು ವಹಿಸುವರು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಿಳಿಸಿದ್ದಾರೆ.