i
ಮುರುಘಾ ಶರಣರ ಪೋಕ್ಸೋ ಪ್ರಕರಣದ ಆರೋಪಿ ವಾರ್ಡನ್ ರಶ್ಮಿ ನ್ಯಾಯಾಂಗ ಬಂಧನ ವಿಸ್ತರಣೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗದ ಶಿವಮೂರ್ತಿ ಮುರುಘಾ ಶರಣರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಫೋಕ್ಸೋ ಪ್ರಕರಣದಡಿ ಕಾರಾಗೃಹದಲ್ಲಿರುವ ಪ್ರಕರಣಕ್ಕೆ ಸಂಬಂಧಿಸಿದ ಎ1 ಮುರುಘಾ ಶರಣ, ಆರೋಪಿ ಎ2 ವಾರ್ಡನ್ ರಶ್ಮಿ, ಆರೋಪಿ ಎ4 ಮ್ಯಾನೇಜರ್ ಪರಮಶಿವಯ್ಯ ಇವರುಗಳ ನ್ಯಾಯಾಂಗ ಬಂಧನ ಅವಧಿಯನ್ನು ಡಿ.3 ರವರೆಗೆ ವಿಸ್ತರಣೆ ಮಾಡಿ ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಮಾಡಿದೆ.
ನವೆಂಬರ್ 28ಕ್ಕೆ ಶಿವಮೂರ್ತಿ ಮುರುಘಾ ಶರಣರ 2ನೇ ಫೋಕ್ಸೋ ಪ್ರಕರಣದ ಜಾಮೀನು ಅರ್ಜಿ ವಿಚಾರಣೆಯು ಚಿತ್ರದುರ್ಗ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆಯಲಿದೆ.