i
ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಅವರ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಪೋಕ್ಸೋ ಪ್ರಕರಣದ ಮೇಲೆ ಕಾರಾಗೃಹದಲ್ಲಿರುವ ಮುರುಘಾ ಶರಣರ ವಿರುದ್ಧ ಪಿತೂರಿ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಹಾಗೂ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ. ಬಸವರಾಜನ್ ಅವರ ನ್ಯಾಯಾಂಗ ಬಂಧನ ಅವಧಿಯನ್ನು ಡಿಸೆಂಬರ್ 12 ರವರೆಗೆ ಇಲ್ಲಿನ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಸ್ತರಣೆ ಮಾಡಿ ಆದೇಶ ಮಾಡಿದೆ.
ಎಸ್.ಕೆ.ಬಸವರಾಜನ್ ಅವರೊಟ್ಟಿಗೆ ಶಿಕ್ಷಕ ಬಸವರಾಜೇಂದ್ರ ಅವರ ನ್ಯಾಯಾಂಗ ಬಂಧನ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ.