i
ಕೋಟೆ ನಾಡಿನಲ್ಲಿ ಬೃಹತ್ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಸಮಾವೇಶ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಕಾಂಗ್ರೆಸ್ ಪಕ್ಷದ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಗಳ ಐಕ್ಯತಾ ಸಮಾವೇಶಕ್ಕೆ ದಿನಾಂಕ ನಿಗದಿ ಮಾಡಿದೆ. ರಾಜ್ಯ ಕಾಂಗ್ರೆಸ್ ವತಿಯಿಂದ ಜನವರಿ 8 ರಂದು ಚಿತ್ರದುರ್ಗದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಐಕ್ಯತಾ ಸಮಾವೇಶ ನಡೆಸಲು ನಿರ್ಧರಿಸಿದೆ.
ಕಲ್ಯಾಣ ಕರ್ನಾಟಕದಲ್ಲಿ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಒಂದು ಸಮಾವೇಶವನ್ನು ನಡೆಸಲು ನಿರ್ಧರಿಸಲಾಗಿದೆ.
2023ಕ್ಕೆ ಕಾಂಗ್ರೆಸ್ ಪಕ್ಷ ಅಧಿಕಾರ ಹಿಡಿಯಲೇಬೇಕು ಎನ್ನುವ ಉತ್ಸಾಹದಲ್ಲಿದ್ದು ಇದಕ್ಕಾಗಿ ಹಲವು ಸಮಾವೇಶಗಳನ್ನು ಆಯೋಜಿಸುವ ಮೂಲಕ ಮತದಾರರನ್ನು ತನ್ನತ್ತ ಸೆಳೆಯುವ ಉದ್ದೇಶ ಹೊಂದಿದೆ. ಈ ನಿಟ್ಟಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮತಗಳನ್ನು ಸೆಳೆಯುವ ಉದ್ದೇಶದಿಂದ ಬೃಹತ್ ಸಮಾವೇಶ ಆಯೋಜಿಸಸಲು ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಕಾಂಗ್ರೆಸ್ ನಾಯಕರ ಮುಂದಿಟ್ಟಿದ್ದನ್ನು ಸ್ಮರಿಸಬಹುದಾಗಿದೆ.