i
ಮುರುಘಾ ಮಠದ ಹಾಸ್ಟೆಲ್ ನಲ್ಲಿದ್ದ 22 ಅನಾಥ ಮಕ್ಕಳು ಕಣ್ಮರೆ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಪೋಕ್ಸೋ ಪ್ರಕರಣದಲ್ಲಿ ಕಾರಾಗೃಹದಲ್ಲಿರುವ ಮುರುಘಾ ಶರಣರಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದ್ದು ಮುರುಘಾ ಮಠದ ಹಾಸ್ಟೆಲ್ನಲ್ಲಿದ್ದ 22 ಅನಾಥ ಮಕ್ಕಳು ನಾಪತ್ತೆಯಾಗಿರುವ ಗಂಭೀರ ಆರೋಪ ಕೇಳಿಬಂದಿದೆ.
ಮುರುಘಾಮಠದ ಹಾಸ್ಟೆಲ್ ನಲ್ಲಿದ್ದ 22 ಅನಾಥ ಮಕ್ಕಳು ನಾಪತ್ತೆಯಾಗಿದ್ದಾರೆಂದು ಚಿತ್ರದುರ್ಗದ ಆರ್ಟಿಐ ಕಾರ್ಯಕರ್ತ ಬಿ.ಎಚ್.ಗೌಡ್ರು ಗಂಭೀರ ಆರೋಪ ಮಾಡಿದ್ದಾರೆ. ನಾಪತ್ತೆಯಾಗಿರುವವರ ಪೈಕಿ 14 ಹೆಣ್ಣು ಹಾಗೂ 8 ಗಂಡು ಮಕ್ಕಳಿದ್ದಾರೆ. ಮಕ್ಕಳ ನಾಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತನಿಖೆ ನಡೆಸಬೇಕು ಅವರು ಒತ್ತಾಯಿಸಿದ್ದಾರೆ.
ಈ ಸಂಬಂಧ ಎಡಿಜಿಪಿ ಅಲೋಕ್ ಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಜಿಲ್ಲಾಧಿಕಾರಿ ದಿವ್ಯಪ್ರಭು, ಎಸ್ಪಿ ಕೆ.ಪರಶುರಾಮ್ ಅವರಿಗೆ ದೂರಿನ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದ್ದಾರೆ.
ನಾಪತ್ತೆಯಾಗಿರುವ ಮಕ್ಕಳು ಎಲ್ಲಿದ್ದಾರೆ? ಹೇಗಿದ್ದಾರೆ ಎಂಬ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.