i
ಯುವತಿ ಐಶ್ವರ್ಯ ಚಂದ್ರಶೇಖರ್ ನಾಪತ್ತೆ: ಪತ್ತೆಗೆ ಸಹಕರಿಸಲು ಮನವಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ತಾಲ್ಲೂಕು ಕುಂಚಿಗನಾಳ ಗ್ರಾಮದ ಸಿ. ಐಶ್ವರ್ಯ (19 ವರ್ಷ) ತಂದೆ ಹೆಚ್. ಚಂದ್ರಶೇಖರ್ ಎಂಬ ಯುವತಿ ಗ್ರಾಮದಿಂದ ಕಾಣೆಯಾಗಿದ್ದು, ಇದುವರೆಗೂ ಪತ್ತೆಯಾಗಿರುವುದಿಲ್ಲ. ಈ ಕುರಿತಂತೆ ಸಂಬಂಧಿಕರು, ಸ್ನೇಹಿತರ ಮನೆಗಳಲ್ಲಿ ವಿಚಾರಿಸಿದರೂ ಮಾಹಿತಿ ಸಿಕ್ಕಿರುವುದಿಲ್ಲ. ಈ ಬಗ್ಗೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುತ್ತದೆ. ಕಾಣೆಯಾದ ಯುವತಿಯ ಚಹರೆ ವಿವರ ಇಂತಿದೆ. ಹೆಸರು– ಸಿ. ಐಶ್ವರ್ಯ, ವಯಸ್ಸು 19, ನಾಯಕ ಜನಾಂಗಕ್ಕೆ ಸೇರಿದ್ದು, ಕೋಲು ಮುಖ, ಸಾಧಾರಣ ಮೈಕಟ್ಟು, ಎತ್ತರ 5.2 ಅಡಿ, ಬಿಳಿ ಮೈಬಣ್ಣ, ತಲೆಯಲ್ಲಿ ಸುಮಾರು 14 ಇಂಚು ಉದ್ದದ ಕಪ್ಪು ಕೂದಲಿದ್ದು, ಕನ್ನಡ ಭಾಷೆ ಮಾತನಾಡುತ್ತಾಳೆ.
ಈ ಮೇಲ್ಕಂಡ ಚಹರೆ ವಿವರವುಳ್ಳ ಯುವತಿಯ ಕುರಿತು ಮಾಹಿತಿ ದೊರೆತಲ್ಲಿ ಕೂಡಲೆ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯ ಆರಕ್ಷಕ ಉಪನಿರೀಕ್ಷಕರು ತಿಳಿಸಿದ್ದಾರೆ.