i
ಗ್ರಾಪಂ ಪಿಡಿಒ, ಕಾರ್ಯದರ್ಶಿಗಳಿಗೆ ಆರೋಗ್ಯ ತಪಾಸಣೆ ಶಿಬಿರ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾ ಪಂಚಾಯತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪಿವಿಎಸ್ ಹಾಸ್ಪಿಟಲ್ ಇಂಡಿಯಾನ ಎಸ್ಜೆಎಂ ಹಾರ್ಟ್ ಸೆಂಟರ್, ಬಸವೇಶ್ವರ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಮತ್ತು ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ, ಜಿಲ್ಲಾ ಶಾಖೆ ಚಿತ್ರದುರ್ಗ ಇವರ ಸಹಯೋಗದಲ್ಲಿ ಜಿಲ್ಲೆಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ, ಎಸ್ಡಿಎಎ ಗಳಿಗೆ ಆರೋಗ್ಯ ತಪಾಸಣಾ ಶಿಬಿರವನ್ನು ಡಿ. 02 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ, ಎಸ್ಡಿಎಗಳು ಈ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ, ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್. ದಿವಾಕರ್ ಅವರು ತಿಳಿಸಿದ್ದಾರೆ.