i
ಮಹಿಳೆಯರ ಸಾಲ ಮನ್ನಾ, ಜೆಡಿಎಸ್ ಪಕ್ಷಕ್ಕೆ ಪೂರ್ಣ ಬಹುಮತ ನೀಡಿ ಸರ್ಕಾರ ತನ್ನಿ-ಕುಮಾರಸ್ವಾಮಿ…
ಚಂದ್ರವಳ್ಳಿ ನ್ಯೂಸ್, ಡಾಬಸ್ ಪೇಟೆ:
ಒಂದೇ ಒಂದು ಬಾರಿ ಜೆಡಿಎಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ನೀಡಿ ಅಧಿಕಾರಕ್ಕೆ ತರುವಂತೆ ಎಂದು ಮತದಾರರಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಜೆಡಿಎಸ್ ಪಂಚರತ್ನ ರಥಯಾತ್ರೆ ಅದ್ಧೂರಿ ಸ್ವಾಗತ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ನಮ್ಮ ಪಕ್ಷಕ್ಕೊಮ್ಮೆ ಪೂರ್ಣ ಪ್ರಮಾಣದ ಬಹುಮತ ನೀಡಿದರೆ ಪಂಚರತ್ನ ಯೋಜನೆ ಜಾರಿಗೆ ತರುತ್ತೇವೆ.ಅಧಿಕಾರ ಕೊಟ್ಟ 24 ಗಂಟೆಗಳಲ್ಲಿ ಸ್ತ್ರೀ ಶಕ್ತಿ ಸಾಲ ಮನ್ನಾ ಮಾಡುತ್ತೇವೆ ಎಂದು ಕುಮಾರಸ್ವಾಮಿ ಹೇಳಿದರು.
ಈ ಬಿಜೆಪಿ ಸರ್ಕಾರ ಬರೋದಕ್ಕೆ ಕಾಂಗ್ರೆಸ್ನವರೆ ಕಾರಣ , ಕೆಲವರು ಮುಸ್ಲಿಂ ಅಂಗಡಿಯಲ್ಲಿ ವ್ಯಾಪಾರ ಮಾಡಬೇಡಿ ಅಂತಿದ್ದಾರೆ. ಅಲ್ಲೆಲ್ಲೋ ಕುಕ್ಕರ್ ಬ್ಲಾಸ್ಟ್ ಅಂದರು.. ಬಡವರು ಬೀದಿ ಪಾಲಾಗುತ್ತಿದ್ದಾರೆ. ಒಂದು ಬಾರಿ ಜೆಡಿಎಸ್ ಸ್ವತಂತ್ರ್ಯ ಸರ್ಕಾರಕ್ಕೆ ಅವಕಾಶ ನೀಡಿ ಎಂದು ಮತದಾರರಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.