i
ಜೆಡಿಎಸ್ ಪಕ್ಷಕ್ಕೆ ಸ್ಪಷ್ಟ ಬಹುಮತ ಬಂದರೆ ದಲಿತ ಮುಖ್ಯಮಂತ್ರಿ…
ಚಂದ್ರವಳ್ಳಿ ನ್ಯೂಸ್, ತುಮಕೂರು:
ರಾಜ್ಯದಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ದಲಿತರನ್ನು ಉಪಮುಖ್ಯಮಂತ್ರಿ ಮಾಡುವುದಾಗಿ ಹೇಳಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಇದೀಗ ಜೆಡಿಎಸ್ ಗೆ ಬಹುಮತ ಸಿಕ್ಕರೆ ದಲಿತರನ್ನು ಮುಖ್ಯಮಂತ್ರಿ ಮಾಡುವುದಾಗಿ ಘೋಷಣೆ ಮಾಡಿದ್ದಾರೆ.
ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, 2023ರ ಚುನಾವಣೆಯಲ್ಲಿ ಜೆಡಿಎಸ್ ಗೆ 123 ಸ್ಥಾನ ಬಂದರೆ ದಲಿತರನ್ನು ಮುಖ್ಯಮಂತ್ರಿ ಮಾಡಲು ನಾವು ಸಿದ್ಧರಿದ್ದೇವೆ. ಮೀಸಲು ಇರದಿದ್ದಾಗಲೇ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ದಲಿತರಿಗೆ ಅಧಿಕಾರ ನೀಡಿದ್ದರು. ಇದೀಗ ದಲಿತ ಏಕೆ ಮುಖ್ಯಮಂತ್ರಿ ಆಗಬಾರದು? ದಲಿತರನ್ನು ಸಿಎಂ ಮಾಡಲು ನಾವು ಸಿದ್ಧರಿದ್ದೇವೆ ಎಂದು ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.
2023ರ ಚುನಾವಣೆಯಲ್ಲಿ ಯಾರೂ ಮೈ ಮರೆಯಬಾರದು. ಈ ಚುನಾವಣೆಯನ್ನ ಗಂಭೀರವಾಗಿ ತೆಗೆದುಕೊಳ್ಳಬೇಕು. ಕಾರ್ಯಕರ್ತರು ಮತದಾರರ ಮನೆ ಮನೆಗೆ ಹೋಗಿ ಪಕ್ಷದ ಕಾರ್ಯಕ್ರಮದ ಬಗ್ಗೆ ವಿವರಣೆ ಕೊಡಬೇಕು. ಈ ಬಾರಿ ಜೆಡಿಎಸ್ ಸರ್ಕಾರ ಅಧಿಕಾರಕ್ಕೆ ತರಬೇಕು ಎಂದು ಕಾರ್ಯಕರ್ತರಿಗೆ ಉತ್ಸಾಹ ತುಂಬಿದರು.