i
ಹಿರಿಯೂರು ನೂತನ ಬಸ್ ಘಟಕದ ಶಂಕು ಸ್ಥಾಪನಾ ಸಮಾರಂಭ…
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗದಿಂದ ಇದೇ ಡಿಸೆಂಬರ್ 06ರಂದು ಮಂಗಳವಾರ ಸಂಜೆ 4.30ಕ್ಕೆ ಹಿರಿಯೂರು ನಗರದ ಹುಳಿಯಾರ ರಸ್ತೆಯ ತಾಲ್ಲೂಕು ಕ್ರೀಡಾಂಗಣದ ಹತ್ತಿರದ ಬಸ್ ಘಟಕದ ಆವರಣದಲ್ಲಿ ಹಿರಿಯೂರು ನೂತನ ಬಸ್ ಘಟಕದ ಶಂಕುಸ್ಥಾಪನಾ ಸಮಾರಂಭ ಜರುಗಲಿದೆ.
ಕೇಂದ್ರ ಸಂಪುಟದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಖಾತೆ ಸಚಿವ ಎ. ನಾರಾಯಣ ಸ್ವಾಮಿ ಘನ ಉಪಸ್ಥಿತಿ ವಹಿಸುವರು. ರಾಜ್ಯ ಸಾರಿಗೆ ಮತ್ತು ಪರಿಶಿಷ್ಠ ಪಂಗಡಗಳ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಬಸ್ ಘಟಕದ ಶಂಕುಸ್ಥಾಪನೆ ನೆರವೇರಿಸುವರು. ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್, ಕ.ರಾ.ರ.ಸಾ.ನಿಗಮ ಅಧ್ಯಕ್ಷ ಹಾಗೂ ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ, ವಿಧಾನ ಪರಿಷತ್ ಮುಖ್ಯ ಸಚೇತಕರು ಹಾಗೂ ಶಾಸಕ ಡಾ.ವೈ.ಎ. ನಾರಾಯಣಸ್ವಾಮಿ ಗೌರವಾನ್ವಿತ ಉಪಸ್ಥಿತಿ ವಹಿಸುವರು. ಶಾಸಕಿ ಪೂರ್ಣಿಮಾ ಕೆ. ಶ್ರೀನಿವಾಸ್ ಅಧ್ಯಕ್ಷತೆ ವಹಿಸುವರು. ವಿಧಾನ ಪರಿಷತ್ ಶಾಸಕರಾದ ಚಿದಾನಂದ ಎಂ. ಗೌಡ, ಕೆ.ಎಸ್. ನವೀನ್, ನಗರಸಭೆ ಅಧ್ಯಕ್ಷ ಹೆಚ್.ಎಂ. ಗುಂಡೇಶ ಕುಮಾರ್, ಕ.ರಾ.ರ.ಸಾ.ನಿಗಮ ಮಂಡಳಿ ನಿರ್ದೇಶಕರುಗಳಾದ ಪಿ. ರುದ್ರೇಶ್, ಆರುಂಡಿ ನಾಗರಾಜ್, ರಾಜು ವಿಠಲಸ ಜರತಾರಘರ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಸಾರಿಗೆ ಇಲಾಖೆ ಕಾರ್ಯದರ್ಶಿ ಡಾ.ಎನ್.ವಿ. ಪ್ರಸಾದ್, ಕ.ರಾ.ರ.ಸಾ. ನಿಗಮ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್, ಜಿಲ್ಲಾಧಿಕಾರಿ ದಿವ್ಯಾ ಪ್ರಭು ಜಿ.ಆರ್.ಜೆ. ಕ.ರಾ.ರ.ಸಾ.ನಿಗಮ ನಿರ್ದೇಶಕ ಡಾ.ನವೀನ್ ಭಟ್, ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಸ್. ದಿವಾಕರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರುಶುರಾಮ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ ಎನ್.ಹೆಬ್ಬಾಳ್ ತಿಳಿಸಿದ್ದಾರೆ.