i
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ 5 ದಿನ ಮಳೆ ಸಾಧ್ಯತೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಡಿಸೆಂಬರ್ 5 ರಿಂದ 9ರವರೆಗೆ ಸಾಧಾರಣ ಮಳೆ ಯಾಗಲಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಡಿಸೆಂಬರ್-05 ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಾಮರಾಜನಗರ, ಕೊಡಗು, ಮೈಸೂರು, ರಾಮನಗರ ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಮಳೆಯಾಗಲಿದೆ.
ಅದೇ ರೀತಿ ಡಿಸೆಂಬರ್ 9ರಂದು ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.