i
ಬಿಜೆಪಿ ಹಿರಿಯರ ನಾಯಕರಿಗೆ ಟಿಕೆಟ್ ಇಲ್ಲ, ಹಲವು ನಾಯಕರಲ್ಲಿ ನಡುಕ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗುಜರಾತ್ ಚುನಾವಣೆ ಫಲಿತಾಂಶದ ನಂತರ ಬಿಜೆಪಿ ಹಿರಿಯರ ನಾಯಕರಲ್ಲಿ ಆತಂಕ, ನಡುಕ ಉಂಟಾಗಿದ್ದು ಬಹುತೇಕರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ನಿಚ್ಚಳವಾಗಿದೆ.
ಗುಜರಾತನಲ್ಲಿ ಸ್ಪಷ್ಟ ಬಹುಮತ ಪಡೆದು ಬೀಗುತ್ತಿರುವ ಬಿಜೆಪಿ ಕರ್ನಾಟಕ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇವೆಂಬ ವಿಶ್ವಾಸ ಇದೆ ಎಂದು ಮಲ್ಲೇಶ್ವರಂ ಬಿಜೆಪಿ ಕಛೇರಿಯಲ್ಲಿ ಸಚಿವ ಕೋಟಾ ಶ್ರಿನಿವಾಸ ಪೂಜಾರಿ ಹೇಳಿದ್ದಾರೆ.
ಭಾರತೀಯ ಜನತಾ ಪಕ್ಷದ ಪರವಾದ ಅಲೆ ಎದ್ದಿದೆ. ಗುಜರಾತ್ ಮಾದರಿಯಲ್ಲೇ ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಗೆಲ್ಲುತ್ತದೆ. ಪಕ್ಷದ ಗೆಲುವಿಗೆ ಕೆಲಸ ಮಾಡಿದ ಎಲ್ಲಾ ಕಾರ್ಯಕರ್ತರು, ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದರು.
ಅಲ್ಲದೇ ಗುಜರಾತ್ ಮಾದರಿಯಲ್ಲಿ ರಾಜ್ಯದಲ್ಲಿ ಟಿಕೆಟ್ ಹಂಚಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಆ ಶ್ರಮದ ಸಾರ್ಥಕತೆ ಕರ್ನಾಟಕದಲ್ಲಿ ನೀವು ಕಾಣಲಿದ್ದೀರಿ. ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ಕೊಡಬೇಕೆಂದು ಹೈಕಮಾಂಡ್ ತೀರ್ಮಾನ ಮಾಡುತ್ತೆ.ಪರೋಕ್ಷವಾಗಿ ರಾಜ್ಯದಲ್ಲಿ ಕೆಲವರಿಗೆ ಟಿಕೆಟ್ ಕೈತಪ್ಪುತ್ತದೆ ಎಂದು ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದ್ದು ಹಲವರಲ್ಲಿ ಆತಂಕ ಶುರುವಾಗಿದೆ.