i
ಅಂಬರೀಶ್ ಪುತ್ರ ಅಭಿಷೇಕ್ ಹಾಗೂ ಅವಿವಾ ನಿಶ್ಚಿತಾರ್ಥ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರೆಬೆಲ್ ಸ್ಟಾರ್ ಅಂಬರೀಶ್ ಮತ್ತು ಸಂಸದೆ ಸುಮಲತಾ ಪುತ್ರ ಅಭಿಷೇಕ್ ಹಾಗೂ ಅವಿವಾ ನಿಶ್ಚಿತಾರ್ಥಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು ಡಿಸೆಂಬರ್-11 ರಂದು ಭಾನುವಾರ ಖಾಸಗಿ ಹೋಟೆಲ್ ಒಂದರಲ್ಲಿ ನಡೆಯಲಿದೆ.
ಅಭಿಷೇಕ್ ಹಾಗೂ ಅವಿವಾ ಅವರನ್ನು ವರಿಸಲಿದ್ದಾರೆ. ಅಭಿಷೇಕ್ ಅವರ ತಾಯಿ ಸಂಸದೆ ಸುಮಲತಾ ಅಂಬರೀಶ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಈಗಾಗಲೇ ಎಲ್ಲ ತಯಾರಿ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಈಗಾಗಲೇ ಅಭಿಷೇಕ್ ಮದುವೆಗೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಕುಟುಂಬಸ್ತರು ಈಗಾಗಲೇ ಸದ್ದಿಲ್ಲದೇ ಉಂಗುರ ಪೂಜೆ ಮಾಡಿಕೊಂಡಿದ್ದಾರೆ. ಅಂಬರೀಶ್ ಸುಮಲತ ವಿವಾಹ ವಾರ್ಷಿಕೋತ್ಸವದ ದಿನ ಉಂಗುರ ಪೂಜೆ ಮಾಡಲಾಗಿತ್ತು ಎಂದು ಹೇಳಲಾಗಿದೆ. ಡಿಸೆಂಬರ್ 11 ರಂದು ನಿಶ್ಚಿತಾರ್ಥಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಅವಿವಾ ಬಿದ್ದಪ್ಪ ಜೊತೆ ಅಭಿಷೇಕ್ ಸಪ್ತಪದಿ ತುಳಿಯಲಿದ್ದಾರೆ. ನಾಳೆ ಖಾಸಗಿ ಹೋಟೇಲ್ನಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಲಿದೆ. ಸಂಕ್ರಾತಿ ನಂತರ ಮದುವೆ ದಿನವನ್ನು ಘೋಷಣೆ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಅಭಿಷೇಕ್ ಮತ್ತು ಅವಿವಾ ಉಂಗುರ ಬದಲಾಯಿಸಿಕೊಳ್ಳಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಶಿವಣ್ಣ , ರಾಕಿಂಗ್ ಸ್ಟಾರ್ ಯಶ್ ದಂಪತಿ, ದುನಿಯಾ ಸೂರಿ ಸೇರಿದಂತೆ ಸಾಕಷ್ಟು ಸ್ಯಾಂಡಲ್ವುಡ್ ಗಣ್ಯರು ಭಾಗಿ ಆಗಲಿದ್ದಾರೆ. ಹುಡುಗಿ ಕಡೆಯಿಂದ 50 ಮಂದಿ ಹುಡುಗನ ಕಡೆಯಿಂದ 50 ಒಟ್ಟು 100 ಜನ ನಿಶ್ಚಿತಾರ್ಥದಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗುತ್ತಿದೆ.