i
ಭೀಕರ ರಸ್ತೆ ಅಪಘಾತ, ಮೂರು ಮಂದಿ ಸಾವು…
ಚಂದ್ರವಳ್ಳಿ ನ್ಯೂಸ್, ಉಡುಪಿ:
ಭೀಕರ ರಸ್ತೆ ಅಪಘಾತದಲ್ಲಿ ಮೂರು ಮಂದಿ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ಸಂಭವಿಸಿದೆ.
ಖಾಸಗಿ ಬಸ್, ಕಾರು ಮುಖಾಮುಖಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನೆಲ್ಲಿಕಾರು ಗ್ರಾಮದಲ್ಲಿ ಖಾಸಗಿ ಬಸ್, ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ನಾಗರಾಜು (40), ಪತ್ನಿ ಪ್ರತ್ಯುಷಾ (32) ಹಾಗೂ 2 ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರು ಧರ್ಮಸ್ಥಳದಿಂದ ಶೃಂಗೇರಿಗೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿದೆ. ಕಾರ್ಕಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.